ADVERTISEMENT

ಒಳನೋಟ ಪ್ರತಿಕ್ರಿಯೆಗಳು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2022, 11:39 IST
Last Updated 25 ಸೆಪ್ಟೆಂಬರ್ 2022, 11:39 IST
ಯು. ಗಣೇಶ
ಯು. ಗಣೇಶ   

‘ಕಾರ್ಮಿಕರ ಸೌಲಭ್ಯಕ್ಕೂ ಕಮಿಷನ್?’ ಎಂಬ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಭಾನುವಾರ (ಸೆಪ್ಟೆಂಬರ್ 25) ಪ್ರಕಟವಾದ ‘ಒಳನೋಟ’ ವರದಿಗೆ ರಾಜ್ಯದಾದ್ಯಂತ ಓದುಗರು ಪ್ರತಿಕ್ರಿಯಿಸಿದ್ದಾರೆ. ಆಯ್ದ ಕೆಲ ಪ್ರತಿಕ್ರಿಯೆಗಳು ಇಲ್ಲಿವೆ.

‘ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿ’

ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯ ಪಡೆದುಕೊಳ್ಳಲು ಫಲಾನುಭವಿಗಳು ಅಧಿಕಾರಿಗಳಿಗೆ ಕೈ ಬಿಸಿ ಮಾಡಬೇಕಾದ ದುಃಸ್ಥಿತಿ ಇದೆ. ಇಲ್ಲದಿದ್ದರೆ ಅನಗತ್ಯ ದಾಖಲೆಗಳನ್ನು ಕೇಳುವ ಮೂಲಕ ಗ್ರಾಮೀಣ ಭಾಗದ ಮುಗ್ದ ಫಲಾನುಭವಿಗಳನ್ನು ಸತಾಯಿಸಲಾಗುತ್ತದೆ. ಅರ್ಹರಿಗೆ ನೇರವಾಗಿ ತಲುಪಿಸಲು ಸರ್ಕಾರ ವಿವಿಧ ಉ‍ಪಕ್ರಮಗಳನ್ನು ಜಾರಿಗೊಳಿಸಿದರೂ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿಲ್ಲ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಅಧಿಕಾರಿಶಾಹಿ ಮನೋಭಾವ ಬದಲಾವಣೆಯಾಗಬೇಕು. ಆಗ ಮಾತ್ರ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿದೆ.

ADVERTISEMENT

–ಯು. ಗಣೇಶ, ತೋರಣಗಲ್ಲು, ಬಳ್ಳಾರಿ

‘ನೈಜ ಕಾರ್ಮಿಕರಿಗೆ ದೊರೆಯದ ಸೌಲಭ್ಯ’

ಸರ್ಕಾರದ ಪ್ರಮುಖ ಇಲಾಖೆಗಳಲ್ಲಿ ಒಂದಾಗಿರುವ ಕಾರ್ಮಿಕ ಇಲಾಖೆಯ ಯೋಜನೆಗಳು ಹೆಚ್ಚು ದುರ್ಬಳಕೆಯಾಗಿವೆ. ಏಕೆಂದರೆ ಇದರಲ್ಲಿ ನೈಜ ಕಾರ್ಮಿಕರಿಗೆ ಸೌಲಭ್ಯಗಳು ದೊರೆಯುತ್ತಿಲ್ಲ. ಇಲಾಖೆಯ ಅಧಿಕಾರಿಗಳು ಮತ್ತು ಕಾರ್ಮಿಕ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಫಲಾನುಭವಿಗಳು ನೆರವು ಕೋರಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದರೂ ಅದನ್ನು ಪರಿಗಣಿಸುವುದಿಲ್ಲ. ಆದರೆ ಮಧ್ಯವರ್ತಿಗಳಿಂದ ಹೋದ ಅರ್ಜಿಗಳು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

–ಮಾಲತೇಶ ಲಾಠಿ, ರಾಣೆಬೆನ್ನೂರು, ಹಾವೇರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.