ADVERTISEMENT

ಬೆಂಗಳೂರಿನಲ್ಲಿ 146 ಹೊಸ ಓಮೈಕ್ರಾನ್ ಪ್ರಕರಣ: ರಾಜ್ಯದ ಒಟ್ಟು ಸಂಖ್ಯೆ 479

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜನವರಿ 2022, 12:40 IST
Last Updated 10 ಜನವರಿ 2022, 12:40 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ನಗರದಲ್ಲಿ ಒಂದೇ ದಿನಕ್ಕೆ 146 ಹೊಸ ಓಮೈಕ್ರಾನ್‌ ಪ್ರಕರಣಗಳು ಬೆಳಕಿಗೆ ಬಂದಿವೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ‘ಬೆಂಗಳೂರಿನಲ್ಲಿ ಇಂದು 146 ಹೊಸ ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 479ಕ್ಕೆ ತಲುಪಿದೆ’ ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿನ ಕೋವಿಡ್‌ ಪ್ರಕರಣಗಳ ಸಂಖ್ಯೆಯೂ ಶನಿವಾರ ಭಾರಿ ಪ್ರಮಾಣದಲ್ಲಿ ಹೆಚ್ಚಳ ಕಂಡಿತ್ತು. ಒಂದೇ ದಿನ 7,113 ಮಂದಿ ಸೋಂಕು ಹೊಂದಿರುವುದು ದೃಢಪಟ್ಟಿತ್ತು. ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 32,157ಕ್ಕೆ ಏರಿಕೆಯಾಗಿತ್ತು.

ADVERTISEMENT

ಬೆಂಗಳೂರಿಗೆ ಮತ್ತು ರಾಜ್ಯಕ್ಕೆ ಪ್ರತ್ಯೇಕ ಮಾರ್ಗಸೂಚಿಯನ್ನು ಸರ್ಕಾರ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.