ADVERTISEMENT

ಓಮೈಕ್ರಾನ್‌ನಿಂದ ಚೇತರಿಸಿಕೊಂಡಿದ್ದ 46 ವರ್ಷದ ವೈದ್ಯರಲ್ಲಿ ಮತ್ತೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 19:33 IST
Last Updated 7 ಡಿಸೆಂಬರ್ 2021, 19:33 IST
ಪ್ರಾತಿನಿಧಕ ಚಿತ್ರ
ಪ್ರಾತಿನಿಧಕ ಚಿತ್ರ   

ಬೆಂಗಳೂರು:ಕೊರೊನಾ ವೈರಾಣುವಿನ ರೂಪಾಂತರಿ ಓಮೈಕ್ರಾನ್‌ನಿಂದ ಚೇತರಿಸಿಕೊಂಡಿದ್ದ 46 ವರ್ಷದ ವೈದ್ಯರಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆಯಿಂದ (ಜೀನೋಮ್‌ ಸೀಕ್ವೆನ್ಸಿಂಗ್‌)ಅವರಿಗೆ ಹೊಸ ತಳಿಯ ಕೊರೊನಾ ವೈರಾಣು ತಗುಲಿರುವುದು ಕಳೆದ ಗುರುವಾರ ದೃಢಪಟ್ಟಿತ್ತು. ದೇಶದಲ್ಲಿ ವರದಿಯಾದ ಮೊದಲ ಓಮೈಕ್ರಾನ್ ಪ್ರಕರಣವೂ ಇದಾಗಿತ್ತು. ಅವರು ಇಲ್ಲಿನ ಬೌರಿಂಗ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಸಕ್ಕೆ ಒಳಗಾಗಿದ್ದರು. ಪೂರ್ಣ ಪ್ರಮಾಣದಲ್ಲಿ ಚೇತರಿಕೆ ಹೊಂದಿದ್ದರಿಂದ ಮನೆಗೆ ಕಳುಹಿಸಲು ಕೋವಿಡ್‌ ಆರ್‌ಟಿ–ಪಿಸಿಆರ್ ಪರೀಕ್ಷೆಯನ್ನು ಸೋಮವಾರ ನಡೆಸಲಾಗಿತ್ತು. ಮಂಗಳವಾರ ಪರೀಕ್ಷಾ ವರದಿ ಬಂದಿದ್ದು, ಅವರಲ್ಲಿ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

‘ವೈದ್ಯರ ಪ್ರತ್ಯೇಕವಾಸದ ಅವಧಿ ಮುಗಿದಿದ್ದರಿಂದ ಆರ್‌ಟಿ–ಪಿಸಿಆರ್ ಪರೀಕ್ಷೆ ನಡೆಸಲಾಗಿತ್ತು. ಅವರಲ್ಲಿ ಕೊರೊನಾ ಸೋಂಕು ಇನ್ನೂ ಸಕ್ರಿಯವಾಗಿ ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಅವರು ಆರೋಗ್ಯವಾಗಿದ್ದು, ರೋಗ ಲಕ್ಷಣವಿಲ್ಲ. ಅವರ ಸಂಪರ್ಕಿ
ತರವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆ ವರದಿ ಇನ್ನೂ ಬಂದಿಲ್ಲ. ಬುಧವಾರ ಬರುವ ಸಾಧ್ಯತೆ ಇದೆ’ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿಡಾ. ಬಾಲಸುಂದರ್‌ ‘ಪ್ರಜಾವಾಣಿ’ಗೆತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.