ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಬಂದಿರುವ ವ್ಯಕ್ತಿಗಳಲ್ಲಿ ಕೋವಿಡ್ ದೃಢಪಟ್ಟಿದ್ದ ಇಬ್ಬರ ಪೈಕಿ ಒಬ್ಬರಲ್ಲಿರುವ ವೈರಾಣು ತಳಿಯ ಕುರಿತು ಶಂಕೆ ಇದ್ದು, ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ (ಐಸಿಎಂಆರ್) ರವಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ನವದೆಹಲಿ ವರದಿ: ‘ಭಾರತದಲ್ಲಿ ಈವರೆಗೆ ಓಮೈಕ್ರಾನ್ ರೂಪಾಂತರ ತಳಿಯಿಂದ ಕೋವಿಡ್ ಬಂದಿರುವ ಒಂದು ಪ್ರಕರಣವೂ ದೃಢಪಟ್ಟಿಲ್ಲ’ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.