ಬಿ.ವೈ. ವಿಜಯೇಂದ್ರ
ಬೆಂಗಳೂರು: ‘ನಾನೇ ಮತ್ತೊಮ್ಮೆ ಅಧ್ಯಕ್ಷನಾಗಿ ಆಯ್ಕೆಯಾಗುವ ವಿಶ್ವಾಸವಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮರು ನೇಮಕದ ಬಗ್ಗೆ ಯಾವುದೇ ಅನುಮಾನವಿಲ್ಲ’ ಎಂದರು.
ರಾಜ್ಯದ ಹಲವು ಜಿಲ್ಲೆಗಳ ಬಿಜೆಪಿ ಅಧ್ಯಕ್ಷರ ಆಯ್ಕೆ ಬಾಕಿ ಇದ್ದು, ಎರಡು– ಮೂರು ದಿನಗಳಲ್ಲಿ ನಡೆಯಲಿದೆ ಆದಷ್ಟು ಬೇಗನೆ ಜಿಲ್ಲಾಧ್ಯಕ್ಷರ ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಲಾಗುವುದು ಎಂದು ಹೇಳಿದರು.
ಪಕ್ಷದ ಆಂತರಿಕ ಸಮಸ್ಯೆಗಳು ವರಿಷ್ಠರ ಗಮನಕ್ಕೆ ಬಂದಿದೆ. ಯಾರಿಗೆ ನೋಟಿಸ್ ಕೊಡಬೇಕಿತ್ತೋ ಅವರಿಗೆ ಕೊಟ್ಟಾಗಿದೆ. ನೋಟಿಸ್ ಪಡೆದವರು ಉತ್ತರವನ್ನೂ ಕೊಟ್ಟಿದ್ದಾರೆ. ಪಕ್ಷ ಮತ್ತು ಕಾರ್ಯಕರ್ತರ ಹಿತದೃಷ್ಟಿಯಿಂದ ವರಿಷ್ಠರು ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ವಿಜಯೇಂದ್ರ ಹೇಳಿದರು.
ರೆಬೆಲ್ ಎನ್ನಬೇಡಿ: ‘ಯತ್ನಾಳ ಮತ್ತು ತಂಡದವರಿಗೆ ರೆಬೆಲ್‌ಗಳು ಎನ್ನಬೇಡಿ’ ಎಂದು ಸುದ್ದಿಗಾರರಿಗೆ ಸಲಹೆ ನೀಡಿದ ಅವರು, ‘ನಾವು– ಅವರು ಎಲ್ಲ ಸೇರಿ ಪಕ್ಷವನ್ನು ಬಲಪಡಿಸಿ, ಭ್ರಷ್ಟ ಕಾಂಗ್ರೆಸ್ ವಿರುದ್ಧ ಪ್ರಬಲ ಹೋರಾಟ ರೂಪಿಸಬೇಕಾಗಿದೆ. ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಒಟ್ಟಾಗಿ ಹೋರಾಟ ನಡೆಸಲು ಸಿದ್ಧರಿದ್ದೇವೆ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.