ADVERTISEMENT

'ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ' ಹೇಳಿಕೆಗಳಿಗೆ ಕಡಿವಾಣ: ಡಾ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2019, 19:58 IST
Last Updated 22 ಫೆಬ್ರುವರಿ 2019, 19:58 IST
   

ನವದೆಹಲಿ: ‘ಸಿದ್ದರಾಮಯ್ಯ ಸದ್ಯದಲ್ಲೇ ಮತ್ತೆ ಮುಖ್ಯಮಂತ್ರಿಯಾಗುವರು ಎಂಬ ಅರ್ಥದ ಹೇಳಿಕೆಗಳಿಗೆ ಕಡಿವಾಣ ಹಾಕಬೇಕೆಂಬ ಕಟ್ಟು ನಿಟ್ಟಿನ ಸೂಚನೆಯನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದೆ’ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಗುರುವಾರ ಇಲ್ಲಿ ಅವರು ತಮ್ಮ ಪಕ್ಷದ ವರಿಷ್ಠ ಅಹ್ಮದ್ ಪಟೇಲ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರ ನೀಡಿದರು.

‘2019ರಲ್ಲಿ ಸಿದ್ದರಾಮಯ್ಯ ಅವರೇ ಪುನಃ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ್ ಹೇಳಿಕೆ ಅವರ ವೈಯಕ್ತಿಕ ಅನಿಸಿಕೆ.ಅದನ್ನು ಬಹಿರಂಗವಾಗಿ ಹೇಳಿಕೊಳ್ಳಬಾರದಿತ್ತು.ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನೋಡಿಕೊಳ್ಳುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ’ ಎಂದು ಪರಮೇಶ್ವರ ವಿವರಿಸಿದರು.

ADVERTISEMENT

‘ಮುಂಬರುವ ಲೋಕಸಭಾ ಚುನಾವಣೆಗಳಿಗೆ ತಯಾರಿ ಕುರಿತು ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿದ್ದೆ.ಅವರು ಕೆಲ ಮಾರ್ಗಸೂಚಿಗಳನ್ನು ನೀಡಿದ್ದಾರೆ.ಅವುಗಳನ್ನು ಬಹಿರಂಗಪಡಿಸಲಾಗದು. ಜೆಡಿಎಸ್‌ನೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಕೆಲವೇ ದಿನಗಳಲ್ಲಿ ಅಂತಿಮಗೊಳಿಸಲಾಗುವುದು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.