ಬೆಂಗಳೂರು: ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ನೀಡಲಾದ ₹ 1 ಕೋಟಿ ಚೆಕ್ಕನ್ನು ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾನ್ ಫಿನ್ ಹೋಮ್ಸ್ ವ್ಯವಸ್ಥಾಪಕ ನಿರ್ದೇಶಕ ಗಿರೀಶ್ ಕೌಸ್ಗಿ, ಉಪ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ್ ಭಂಡಿವಾಡ ಹಾಗೂ ಉಪ ಮಹಾಪ್ರಬಂಧಕ ಅಜಯ್ ಕುಮಾರ್ ಶೆಟ್ಟರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.