ADVERTISEMENT

ರೈತರಿಗೆ ‘ಒಂದು ಜಿಲ್ಲೆ, ಒಂದು ಉತ್ಪನ್ನ’ ತರಬೇತಿ

ಕೃಷಿ ಸಚಿವ ಬಿ.ಸಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2020, 7:21 IST
Last Updated 6 ಡಿಸೆಂಬರ್ 2020, 7:21 IST
ಬಿ.ಸಿ.ಪಾಟೀಲ
ಬಿ.ಸಿ.ಪಾಟೀಲ   

ಬೆಂಗಳೂರು: ‘ಆಹಾರ ಸಂಸ್ಕರಿಸುವ ಸಣ್ಣ ಉದ್ದಿಮೆಗಳ ಮಧ್ಯೆ ಸ್ಪರ್ಧಾತ್ಮಕತೆ ಹೆಚ್ಚಿಸುವ ಉದ್ದೇಶದಿಂದ ರೈತರಿಗೆ ‘ಒಂದು ಜಿಲ್ಲೆ, ಒಂದು ಉತ್ಪನ್ನ (ಬೆಳೆ)’ ತರಬೇತಿ ನೀಡಲು ನಿರ್ಧರಿಸಲಾಗಿದೆ’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಈ ಕುರಿತು ಮೈಸೂರಿನ ಕೇಂದ್ರೀಯ ಆಹಾರ ಸಂಶೋಧನೆ ಮತ್ತು ತಂತ್ರಜ್ಞಾನ ಸಂಸ್ಥೆಯ (ಸಿಎಫ್‌ಟಿಆರ್‌ಐ) ಮುಖ್ಯಸ್ಥರ ಜೊತೆ ಶನಿವಾರ ಚರ್ಚಿಸಿದ ಬಳಿಕ ಮಾತನಾಡಿದ ಅವರು, ‘ಜ.11ರಿಂದ ಮಾರ್ಚ್ 30ರವರೆಗೆ ತರಬೇತಿ ನಡೆಸಲು ಉದ್ದೇಶಿಸಲಾ
ಗಿದೆ’ ಎಂದರು.

‘ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮವು (ಕೆಪೆಕ್‌) ಪ್ರತಿ ತಾಲ್ಲೂಕಿನಿಂದ ಇಬ್ಬರು ರೈತರನ್ನು ಆಯ್ಕೆ ಮಾಡಿ, 50 ಮಂದಿಯ ಗುಂಪು ರಚಿಸಿ ಒಟ್ಟು 500 ಮಂದಿಗೆ ತರಬೇತಿ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಆರು ದಿನಗಳ ಈ ತರಬೇತಿಯಲ್ಲಿ ಕೊನೆಯ ಎರಡು ದಿನ ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್‌ ಬಗ್ಗೆ ಒತ್ತು ನೀಡಲಾಗುವುದು. ವಿಶೇಷವಾಗಿ ಮೆಕ್ಕೆಜೋಳ, ತೊಗರಿ ಹಾಗೂ ಸಿರಿಧಾನ್ಯಗಳ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು’ ಎಂದರು.

ADVERTISEMENT

‘ಒಂದು ಜಿಲ್ಲೆ, ಒಂದು ಉತ್ಪನ್ನ ಅಥವಾ ಬೆಳೆ ಪ್ರೋತ್ಸಾಹಿಸುವುದು ಯೋಜನೆಯ ಉದ್ದೇಶ. ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು ಈ ಯೋಜನೆಯಡಿ ಉತ್ಪನ್ನಗಳನ್ನು ಗುರುತಿಸಿ, ಉತ್ಪನ್ನದ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆ ಪ್ರೋತ್ಸಾಹಿಸಲು ತರಬೇತಿ ನೀಡಲಾಗುವುದು’ ಎಂದೂ ಸಚಿವರು ಹೇಳಿದರು.

ಸಿಎಫ್‌ಟಿಆರ್‌ಐ ನಿರ್ದೇಶಕ ಜಿತೇಂದ್ರ ಜಾಧವ್‌,
ಮುಖ್ಯಸ್ಥ ಉಮೇಶ್ ಹೆಬ್ಬಾರ್ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.