ADVERTISEMENT

ಪುಟಾಣಿಗಳಿಗೆ ಆನ್ಲೈನ್ ಶಿಕ್ಷಣ: ಸರ್ಕಾರದಿಂದ ನಿಷೇಧ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 12:47 IST
Last Updated 10 ಜೂನ್ 2020, 12:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ಎಲ್‌ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಶಾಲೆಯ ತರಗತಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಆನ್‌ಲೈನ್‌ ಹೆಸರಲ್ಲಿ ನಡೆಯುತ್ತಿರುವ ತರಗತಿಗಳನ್ನು ಸ್ಥಗಿತಗೊಳಿಸಬೇಕು ಹಾಗೂ ಆನ್‌ಲೈನ್‌ ಹೆಸರಲ್ಲಿ ಶುಲ್ಕ ಪಡೆಯುವುದನ್ನು ನಿಲ್ಲಿಸಬೇಕು. ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳು ಶುಲ್ಕ ಹೆಚ್ಚಳ ಮಾಡಲೇಬಾರದು ಎಂದು ಸಚಿವರು ತಿಳಿಸಿದರು.

ADVERTISEMENT

5ನೇ ತರಗತಿವರೆಗೆ ಆನ್‌ಲೈನ್‌ ತರಗತಿ ನಡೆಸಿದರೆ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು ಎಂಬ ತಜ್ಞರ ಸಲಹೆಯಂತೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.