ADVERTISEMENT

ಆನ್‌ಲೈನ್‌ ಶಿಕ್ಷಣ: ರಾಜ್ಯ ಸರ್ಕಾರದ ವಿವರಣೆ ಕೇಳಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 22 ಜೂನ್ 2020, 19:53 IST
Last Updated 22 ಜೂನ್ 2020, 19:53 IST
ಕರ್ನಾಟಕ ಹೈಕೋರ್ಟ್‌- ಸಾಂದರ್ಭಿಕ ಚಿತ್ರ
ಕರ್ನಾಟಕ ಹೈಕೋರ್ಟ್‌- ಸಾಂದರ್ಭಿಕ ಚಿತ್ರ   

ಬೆಂಗಳೂರು: ‘1ರಿಂದ 5ನೇ ತರಗತಿವರೆಗೆ ಆನ್‍ಲೈನ್ ಶಿಕ್ಷಣವನ್ನು ನಿಗದಿತ ಅವಧಿಯವರೆಗಾದರೂ ಮುಂದುವರಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿ ವಿವರಣೆ ನೀಡಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

5ನೇ ತರಗತಿವರೆಗಿನ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ನಿಷೇಧಿಸಿ ಜೂನ್15ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ಕರ್ನಾಟಕ ಶಿಕ್ಷಣ ಕಾಯ್ದೆ ವ್ಯಾಪ್ತಿಗೆ ಒಳಪಡದ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮದ ಶಾಲೆಗಳಿಗೆ ರಾಜ್ಯ ಸರ್ಕಾರದ ಆದೇಶ ಹೇಗೆ ಅನ್ವಯವಾಗಲಿದೆ ಎಂಬುದನ್ನು ವಿವರಿಸಿ’ ಎಂದು ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.