ADVERTISEMENT

ಕೃಷಿ ವಿಶ್ವವಿದ್ಯಾಲಯ: ಆನ್‌ಲೈನ್ ಪರೀಕ್ಷೆ ನಿರಾಳ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2020, 18:22 IST
Last Updated 31 ಆಗಸ್ಟ್ 2020, 18:22 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು:ಬಿಎಸ್‍ಸಿ ಮತ್ತು ಡಿಪ್ಲೊಮಾ ಕೋರ್ಸ್‍ಗಳಿಗೆ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಸೆ.2ರಿಂದ ಆರಂಭಿಸಲು ಉದ್ದೇಶಿಸಿರುವ ಆನ್‍ಲೈನ್ ಪರೀಕ್ಷೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಬಿಎಸ್‍ಸಿ ವಿದ್ಯಾರ್ಥಿಗಳ ಗುಂಪು ಸಲ್ಲಿಸಿದ್ದಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ವಿಲೇವಾರಿ ಮಾಡಿದ್ದು, ನಿಗದಿಯಂತೆ ಪರೀಕ್ಷೆಗಳು ನಡೆಯಲಿವೆ.

‘ವಿದ್ಯುತ್ ಸಮಸ್ಯೆ ಅಥವಾ ಇನ್ನಿತರೆ ಕಾರಣಗಳಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸಲಾಗುವುದು’ ಎಂದು ವಿಶ್ವವಿದ್ಯಾಲಯ ಭರವಸೆ ನೀಡಿದ ನಂತರ ನ್ಯಾಯಾಲಯ ಅರ್ಜಿಯನ್ನು ವಿಲೇವಾರಿ ಮಾಡಿತು.

‘ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು, ಇಂಟರ್‌ನೆಟ್ ಸೌಲಭ್ಯ ಇರುವುದಿಲ್ಲ. ಹೀಗಾಗಿ ಆನ್‍ಲೈನ್ ಪರೀಕ್ಷೆ ನಡೆಸಬಾರದು’ ಎಂದು ಅರ್ಜಿದಾರರು ಮನವಿ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.