ADVERTISEMENT

ಆನ್‌ಲೈನ್‌ ಗೇಮ್‌ | ಬಲವಂತದ ಕ್ರಮ ಇಲ್ಲ: ಹೈಕೋರ್ಟ್‌ಗೆ ಸರ್ಕಾರದ ಭರವಸೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2021, 4:14 IST
Last Updated 12 ನವೆಂಬರ್ 2021, 4:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:‘ಆನ್‌ಲೈನ್‌ ಗೇಮಿಂಗ್ ಕಂಪನಿಗಳ ವಿರುದ್ಧ ಸದ್ಯಕ್ಕೆ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಕರ್ನಾಟಕ ಪೊಲೀಸ್ ತಿದ್ದುಪಡಿ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ, ’ಆಲ್‌ ಇಂಡಿಯಾ ಗೇಮಿಂಗ್ ಫೆಡರೇಷನ್‌’ ಸೇರಿದಂತೆ ಇತರರು ಸಲ್ಲಿಸಿರುವಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಅರ್ಜಿದಾರ ‘ರಮ್ಮಿ ಫೆಡರೇಷನ್’ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನುಸಿಂಘ್ವಿ, ‘ಸ್ಕಿಲ್ ಮತ್ತು ಛಾನ್ಸ್’ ಎಂಬ ಎರಡು ಆಟಗಳಿದ್ದು, ಸ್ಕಿಲ್ ಗೇಮ್‌ ತಡೆಯಲಾಗದು’ ಎಂದರು. ಸಮಯದ ಕೊರತೆ ಕಾರಣ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.