ADVERTISEMENT

ಆನ್‌ಲೈನ್‌ ಗೇಮಿಂಗ್‌ ನಿಯಂತ್ರಣ ಕಾಯ್ದೆ:‘ಸು‍ಪ್ರೀಂ‘ಗೆ ಅರ್ಜಿಗಳ ವರ್ಗಾವಣೆಗೆಮನವಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 14:02 IST
Last Updated 4 ಸೆಪ್ಟೆಂಬರ್ 2025, 14:02 IST
ಕೋರ್ಟ್ ತೀರ್ಪು
ಕೋರ್ಟ್ ತೀರ್ಪು   

ಪ್ರಜಾವಾಣಿ ವಾರ್ತೆ

ನವದೆಹಲಿ: ‘ಆನ್‌ಲೈನ್‌ ಗೇಮಿಂಗ್‌ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ’ ಪ್ರಶ್ನಿಸಿ ಕರ್ನಾಟಕ ಸೇರಿದಂತೆ ಮೂರು ಹೈಕೋರ್ಟ್‌ಗಳಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಕೇಂದ್ರ ಸರ್ಕಾರ ಗುರುವಾರ ಅರ್ಜಿ ಸಲ್ಲಿಸಿದೆ. 

ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠದ ಎದುರು ಈ ಅರ್ಜಿ ಸಲ್ಲಿಸಲಾಗಿದೆ. 

ADVERTISEMENT

‘ಕಾಯ್ದೆ ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಮುಂದಿನ ವಿಚಾರಣೆ ಸೋಮವಾರ ನಿಗದಿಯಾಗಿದೆ. ಸೋಮವಾರವೇ ಅರ್ಜಿ ವಿಚಾರಣೆ ನಡೆಸಬೇಕು‘ ಎಂದು ಕೇಂದ್ರ ಸರ್ಕಾರದ ಪರ ವಕೀಲರು ಮನವಿ ಮಾಡಿದರು. 

ಅರ್ಜಿಯನ್ನು ಮುಂದಿನ ವಾರ ವಿಚಾರಣೆಗೆ ಪಟ್ಟಿ ಮಾಡಲು ಸಿಜೆಐ ಒಪ್ಪಿಕೊಂಡರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.