ADVERTISEMENT

ಸಿಇಟಿಗೆ ಆನ್‌ಲೈನ್‌ ವ್ಯವಸ್ಥೆ: ಜಿಟಿಡಿ

​ಪ್ರಜಾವಾಣಿ ವಾರ್ತೆ
Published 9 ಜನವರಿ 2019, 19:36 IST
Last Updated 9 ಜನವರಿ 2019, 19:36 IST

ಬೆಂಗಳೂರು: ‘ಎಂಜಿನಿಯರಿಂಗ್ ಕಾಲೇಜು ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಆನ್‍ಲೈನ್‍ ವ್ಯವಸ್ಥೆ ಅಳವಡಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ‘ಆನ್‌ಲೈನ್ ಮೂಲಕ ಪರೀಕ್ಷೆ ನಡೆಸಲು ಉದ್ದೇಶಿಸಿದ್ದೇವೆ. ಇದರಿಂದ ಪಾರದರ್ಶಕತೆ ತರಲು ಸಾಧ್ಯ’ ಎಂದರು.

‘ಪರೀಕ್ಷೆ ನಡೆಸಲು ತಂತ್ರಾಂಶ ಅಭಿವೃದ್ಧಿಪಡಿಸಬೇಕಿದೆ. ಈ ಬಗ್ಗೆ ಇದೇ 19ರಂದು ಸಭೆ ನಡೆಯಲಿದ್ದು, ಅಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳುತ್ತೇವೆ‘ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.