ADVERTISEMENT

ಪದವಿ: ಆನ್‌ಲೈನ್‌ ಬೋಧನೆ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 21 ಮೇ 2021, 16:36 IST
Last Updated 21 ಮೇ 2021, 16:36 IST
ಡಾ. ಸಿ.ಎನ್. ಅಶ್ವತ್ಥನಾರಾಯಣ
ಡಾ. ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: ‘ಪದವಿ ಕೋರ್ಸ್‌ಗಳ ಬೆಸ ಸೆಮಿಸ್ಟರ್‌ಗಳಿಗೆ ಇನ್ನೂ ಪರೀಕ್ಷೆ ನಡೆಸಿರದಿದ್ದರೂ, ಅವುಗಳ ಮುಂದಿನ ಸಮ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಆನ್‌ಲೈನ್‌ ತರಗತಿಗಳನ್ನು ಮುಂದುವರಿಸಿ’ ಎಂದು ರಾಜ್ಯದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಶಿಕ್ಷಣ ಕಾಲೇಜುಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶುಕ್ರವಾರ ಸೂಚನೆ ನೀಡಿದ್ದಾರೆ.

’ಈ ಕೋರ್ಸ್‌ಗಳ ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ಕೋವಿಡ್‌ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು‘ ಎಂದು ಅವರು ತಿಳಿಸಿದರು.

’ಕೆಲವು ಎಂಜಿನಿಯರಿಂಗ್‌ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ಮಾತ್ರ ಮುಂದಿನ ಸೆಮಿಸ್ಟರ್‌ಗಳಿಗೆ ಹೋಗಲು ಕ್ಯಾರಿ ಓವರ್‌ ಪದ್ಧತಿ ಅನ್ವಯವಾಗುವುದಿಲ್ಲ. ಅವುಗಳ ಬಗ್ಗೆ ಆಯಾ ಕುಲಪತಿಗಳು ಹಾಗೂ ಪ್ರಾಂಶುಪಾಲರುಗಳು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಜೊತೆ ಸಮಾಲೋಚನೆ ನಡೆಸಿ ನಿರ್ಧಾರಕ್ಕೆ ಬರಬೇಕು‘ ಎಂದೂ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.