ಅಹಮದಾಬಾದ್: ಗುಜರಾತ್ ವಿಧಾನಸಭೆಯ 182 ಕ್ಷೇತ್ರಗಳಲ್ಲಿ 1,621 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಆದರೆ, ಅವರಲ್ಲಿ ಮಹಿಳೆಯರ ಸಂಖ್ಯೆ 139 ಮಾತ್ರ. ಆಡಳಿತಾರೂಢ ಬಿಜೆಪಿ 18 ಮಹಿಳೆಯರಿಗೆ ಟಿಕೆಟ್ ನೀಡಿದ್ದರೆ ಕಾಂಗ್ರೆಸ್ 14 ಮಹಿಳೆಯರನ್ನು ಕಣಕ್ಕೆ ಇಳಿಸಿದೆ. 2017ರ ಚುನಾವಣೆಗೆ ಹೋಲಿಸಿದರೆ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 2017ರಲ್ಲಿ ಬಿಜೆಪಿ 12 ಮತ್ತು ಕಾಂಗ್ರೆಸ್ 10 ಮಹಿಳೆಯರಿಗೆ ಟಿಕೆಟ್ ನೀಡಿದ್ದವು. ಎಎಪಿ ಆರು ಮಹಿಳೆಯರಿಗೆ ಟಿಕೆಟ್ ನೀಡಿದೆ. ಅವರಲ್ಲಿ ಮೂವರು ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ.
56 ಮಹಿಳೆಯರು ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ.
2017ರ ಚುನಾವಣೆಯಲ್ಲಿ 1,828 ಅಭ್ಯರ್ಥಿಗಳು ಕಣದಲ್ಲಿ ಇದ್ದರು. ಅವರಲ್ಲಿ 126 ಮಂದಿ ಮಾತ್ರ ಮಹಿಳೆ
ಯರಿದ್ದರು. ಆ ಚುನಾವಣೆಯಲ್ಲಿ 13 ಮಹಿಳೆಯರು ಗೆದ್ದಿದ್ದರು. ಒಂಬತ್ತು ಮಹಿಳೆಯರು ಬಿಜೆಪಿಯಿಂದ ಮತ್ತು ನಾಲ್ವರು ಕಾಂಗ್ರೆಸ್‌ನಿಂದ ಗೆಲುವು ಕಂಡಿದ್ದರು. 104 ಮಹಿಳೆಯರು ಠೇವಣಿ ಕಳೆದುಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.