ADVERTISEMENT

ಆಮ್ಲಜನಕ ಉತ್ಪಾದನಾ ಘಟಕ: ತಕ್ಷಣದಿಂದಲೇ ಕಾಮಗಾರಿ ಆರಂಭಿಸಲು ಆರೋಗ್ಯ ಇಲಾಖೆ ಆದೇಶ

​ಪ್ರಜಾವಾಣಿ ವಾರ್ತೆ
Published 6 ಮೇ 2021, 17:07 IST
Last Updated 6 ಮೇ 2021, 17:07 IST
   

ಬೆಂಗಳೂರು: ರಾಜ್ಯದ ಹತ್ತು ಜಿಲ್ಲಾ ಆಸ್ಪತ್ರೆಗಳು ಮತ್ತು 30 ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ಥಳದಲ್ಲೇ ಆಮ್ಲಜನಕ ಉತ್ಪಾದಿಸುವ ಘಟಕಗಳನ್ನು ಸ್ಥಾಪನೆಗೆ ತಕ್ಷಣದಿಂದಲೇ ಕಾಮಗಾರಿ ಆರಂಭಿಸುವಂತೆ ಆರೋಗ್ಯ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಜಿಲ್ಲಾ ಆಸ್ಪತ್ರೆಗಳಲ್ಲಿ ಪ್ರತಿ ನಿಮಿಷಕ್ಕೆ 500 ಲೀಟರ್‌ ಆಮ್ಲಜನಕ ಉತ್ಪಾದನಾ ಸಾಮರ್ಥ್ಯದ ಘಟಕಗಳು ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಪ್ರತಿ ನಿಮಿಷಕ್ಕೆ 390 ಲೀಟರ್‌ ಆಮ್ಲಜನಕ ಉತ್ಪಾದನಾ ಸಾಮರ್ಥ್ಯದ ಘಟಕಗಳನ್ನು ಸ್ಥಾಪಿಸುವ ಪ್ರಸ್ತಾವಕ್ಕೆ ಬುಧವಾರ ಅನುಮೋದನೆ ನೀಡಲಾಗಿದೆ. ಎಲ್ಲ ಕಡೆಗಳಲ್ಲೂ ತುರ್ತಾಗಿ ಕಾಮಗಾರಿ ಆರಂಭಿಸುವಂತೆ ಆರೋಗ್ಯ ಇಲಾಖೆಯ ಮುಖ್ಯ ಎಂಜನಿಯರ್‌ ನಿರ್ದೇಶನ ನೀಡಿದ್ದಾರೆ.

11 ಘಟಕಗಳ ಕಾಮಗಾರಿಯನ್ನು ಮೇ 15ರೊಳಗೆ ಮತ್ತು 29 ಘಟಕಗಳ ಕಾಮಗಾರಿಯನ್ನು ಜೂನ್‌ 31ರ ಒಳಗಾಗಿ ಪೂರ್ಣಗೊಳಿಸುವಂತೆ ಗುಡುವು ವಿಧಿಸಲಾಗಿದೆ.

ADVERTISEMENT

ಕಲಬುರ್ಗಿ, ಬೆಂಗಳೂರು ನಗರ, ಬೀದರ್‌, ಮೈಸೂರು, ಉತ್ತರ ಕನ್ನಡ, ಶಿವಮೊಗ್ಗ, ಚಿತ್ರದುರ್ಗ, ಮಂಡ್ಯ, ಬಾಗಲಕೋಟೆ, ಧಾರವಾಡ, ಬೆಳಗಾವಿ, ದಕ್ಷಿಣ ಕನ್ನಡ, ಗದಗ, ಬಳ್ಳಾರಿ, ಕೊಡಗು, ಹಾಸನ, ಕೋಲಾರ, ಹಾವೇರಿ, ತುಮಕೂರು, ಉಡುಪಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ವಿವಿಧ ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ಥಳದಲ್ಲೇ ಆಮ್ಲಜನಕ ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.