ಮಂಗಳೂರು: ಯುವತಿಯರ ಸರಣಿ ಹಂತಕ ಸೈನೈಡ್ ಮೋಹನ್ಕುಮಾರ್ ವಿರುದ್ಧದ 7ನೇ ಪ್ರಕರಣದಲ್ಲೂ ಜೀವನ ಪರ್ಯಂತ ಜೀವಾವಧಿ ಶಿಕ್ಷೆ ವಿಧಿಸಿ, ಇಲ್ಲಿನ 6 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.
ಬಂಟ್ವಾಳ ತಾಲ್ಲೂಕಿನ ಮಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ವರ್ಷದ ಯುವತಿಯನ್ನು ಮಡಿಕೇರಿಗೆ ಕರೆದೊಯ್ದಿದ್ದ ಆರೋಪಿ ಸೈನೈಡ್ ಮೋಹನ್ ಕುಮಾರ್, 2008 ರ ಜನವರಿ 3ರಂದು ಆಕೆಗೆ ಸೈನೈಡ್ ನೀಡಿ ಕೊಲೆ ಮಾಡಿದ್ದ. 2009ರಲ್ಲಿ ಬರಿಮಾರು ಯುವತಿಯೊಬ್ಬಳ ಕೊಲೆ ಪ್ರಕರಣದ ವಿಚಾರಣೆಯ ವೇಳೆ ಆರೋಪಿ ಸೈನೈಡ್ ಮೋಹನ್ಕುಮಾರ್, ಈ ಕೊಲೆ ಒಪ್ಪಿಕೊಂಡಿದ್ದ.
ಇಲ್ಲಿನ 6 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಡಿ.ಟಿ. ಪುಟ್ಟರಂಗಸ್ವಾಮಿ, 40 ಸಾಕ್ಷಿಗಳನ್ನು ವಿಚಾರಣೆ ನಡೆಸಿದರು. ಮೋಹನ್ಕುಮಾರ್ನ ವಿರುದ್ಧದ ಆರೋಪ ಸಾಬೀತಾಗಿದ್ದು, ಆತನಿಗೆ ಶಿಕ್ಷೆ ವಿಧಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.