ADVERTISEMENT

‘ಆಪರೇಷನ್ ಕಮಲ’ ಭೀತಿ: ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬುಧವಾರ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2018, 9:00 IST
Last Updated 4 ಡಿಸೆಂಬರ್ 2018, 9:00 IST
   

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ನಲ್ಲಿ ಒತ್ತಡ ಹೆಚ್ಚಿದೆ.ಆಪರೇಷನ್ ಕಮಲದ ಭೀತಿಯಿಂದ ಎಚ್ಚೆತ ಕಾಂಗ್ರೆಸ್ ಹಿರಿಯ ನಾಯಕರು ಬುಧವಾರ ಪಕ್ಷದ ಕಚೇರಿಯಲ್ಲಿ ಸಭೆ ಸೇರಲಿದ್ದಾರೆ.

ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಸಿದ್ದರಾಮಯ್ಯ, ಜಿ. ಪರಮೇಶ್ವರ, ದಿನೇಶ್ ಗುಂಡೂರಾವ್ ಮಲ್ಲಿಕಾರ್ಜುನ್ ಖರ್ಗೆ, ವೀರಪ್ಪ ಮೋಯ್ಲಿ, ಕೆ.ಹೆಚ್. ಮುನಿಯಪ್ಪ. ಡಿ.ಕೆ. ಶಿವಕುಮಾರ್, ಕೆ. ಜೆ. ಜಾರ್ಜ್ ಸೇರಿದಂತೆ ೧೫ ಕ್ಕೂ ಹೆಚ್ಚು ಹಿರಿಯ ನಾಯಕರಿಗೆ ಸಭೆಗೆ ಬರುವಂತೆ ಬುಲಾವ್ ಕಳುಹಿಸಲಾಗಿದೆ

ADVERTISEMENT

ಆಪರೇಷನ್ ಕಮಲಕ್ಕೆ ಕೌಂಟರ್ ಸಂಪುಟ ವಿಸ್ತರಣೆ ಬಳಿಕ‌ ಕೈಗೊಳ್ಳ ಬೇಕಾದ ಕ್ರಮ, ಅಸಮಾಧಾನಿತ ನಾಯಕರ ಬಂಡಾಯ ಶಮನ,ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಬೇಕಾದ ದೂರು ದುಮ್ಮಾನಗಳು, ಸರ್ಕಾರ ಹಾಗೂ ಪಕ್ಷದ ನಡುವಿನ ಸಮನ್ವಯ, ಅಧಿಕಾರಿಗಳ ವರ್ಗಾವಣೆ, ಬಡ್ತಿ ಮೀಸಲಾತಿ, ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಎದುರಿಸುವ ತಂತ್ರಗಾರಿಕೆ ಕುರಿತು ಈ ಸಭೆಯಲ್ಲಿಚರ್ಚಿಸುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.