ಬಸವರಾಜ ಬೊಮ್ಮಾಯಿ
ಬೆಂಗಳೂರು: ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಕೃತ್ಯಕ್ಕೆ ಸಿಂಧೂರ ಕಳೆದುಕೊಂಡ ಮಹಿಳೆಯರ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ನಡೆಸಿದೆ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಾಕಿಸ್ತಾನ ಅಂತರರಾಷ್ಟ್ರೀಯ ಭಯೋತ್ಪಾದಕರ ನೆಲೆ ಮತ್ತು ತರಬೇತಿ ನೀಡುವ ಕಾರ್ಖಾನೆಯಾಗಿದೆ. ವಿಶ್ವದಿಂದಲೇ ಭಯೋತ್ಪಾದನೆ ಕಿತ್ತೊಗೆಯುವ ಕೆಲಸವನ್ನು ಭಾರತೀಯ ಸೇನೆ ಆರಂಭಿಸಿದೆ. ಇದು ಆರಂಭ ಅಷ್ಟೆ. ಪಾಕಿಸ್ತಾನದಲ್ಲಿರುವ ಕೊನೆಯ ಭಯೋತ್ಪಾದಕನನ್ನು ಸಂಹಾರ ಮಾಡುವವರೆಗೂ ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದಿದ್ದಾರೆ.
ಎಲ್ಲ ಭಾರತೀಯರು ಒಂದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಸೇನಾ ಪಡೆಗೆ ಬೆಂಬಲ ನೀಡಬೇಕು. ಎಲ್ಲ ದೇಶಗಳು ಭಾರತದ ಈ ಕಾರ್ಯಾಚರಣೆಗೆ ಬೆಂಬಲ ಸೂಚಿಸಬೇಕು ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.