ಜಮೀರ್ ಅಹಮದ್ ಖಾನ್
ಬೆಂಗಳೂರು: ‘ಆಪರೇಷನ್ ಸಿಂಧೂರದ ಮೂಲಕ ದೇಶದ ರಕ್ಷಣೆ ಮತ್ತು ಶಾಂತಿಗಾಗಿ ಹೋರಾಡುತ್ತಿರುವ ಸೈನಿಕರ ಶ್ರೇಯಕ್ಕಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಸೂಚಿಸಿದ್ದಾರೆ.
ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಗುರುವಾರ ಪತ್ರ ಬರೆದಿರುವ ಜಮೀರ್ ಅವರು, ‘ಕಾಶ್ಮೀರ ಕಣಿವೆಯ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ಭಾರತೀಯರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತದ ಸೈನಿಕರು ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ಮಾಡಿ ಅವುಗಳನ್ನು ಧ್ವಂಸಗೊಳಿಸಿದ್ದಾರೆ’ ಎಂದು ವಿವರಿಸಿದ್ದಾರೆ.
‘ನಮ್ಮ ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬಬೇಕಿದೆ. ಹೀಗಾಗಿ ವಕ್ಫ್ ಅಧೀನದಲ್ಲಿರುವ ರಾಜ್ಯದ ಎಲ್ಲ ಮಸೀದಿಗಳಲ್ಲಿ ಮತ್ತು ಇತರ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆ ಸಲ್ಲಿಸಿ’ ಎಂದು ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.