ADVERTISEMENT

ಸಿಇಟಿ ಪರೀಕ್ಷಾ ಕೇಂದ್ರ ಬದಲಿಗೆ ಅವಕಾಶ

ಹೊಸದಾಗಿ 75 ಪರೀಕ್ಷಾ ಕೇಂದ್ರಗಳ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 20 ಮೇ 2020, 20:41 IST
Last Updated 20 ಮೇ 2020, 20:41 IST

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 30 ಮತ್ತು 31ರಂದು ನಡೆಯಲಿದ್ದು, ಲಾಕ್‌ಡೌನ್‌ ಕಾರಣ ಊರಿಗೆ ತೆರಳಿರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಅವರಿರುವ ಊರಿನ ಸಮೀಪದ ಪರೀಕ್ಷಾ ಕೇಂದ್ರ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ.

ಸೋಂಕು ಹರಡುವುದನ್ನು ತಪ್ಪಿಸಲು ಹೆಚ್ಚುವರಿ 75 ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಮಾಹಿತಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ (http://kea.kar.nic.in) ಲಭ್ಯ ಇದೆ. ಇದೇ 22
ರಂದು ಸಂಜೆ 6 ಗಂಟೆಯೊಳಗೆ ಪರೀಕ್ಷಾ ಕೇಂದ್ರ ಬದಲಿಸಿಕೊಳ್ಳಬಹುದು.

ಪರೀಕ್ಷಾ ಕೇಂದ್ರಗಳಿಗೆ ಆದ್ಯತೆಯ ಮೇರೆಗೆ ಮೂರು ಆಯ್ಕೆಗಳನ್ನು ನೀಡಬಹುದು. ಅಭ್ಯರ್ಥಿ ನೀಡುವ ಆದ್ಯತೆ ಮತ್ತು ಪರೀಕ್ಷಾ ಕೇಂದ್ರದ ಲಭ್ಯತೆಯ ಆಧಾರದ ಮೇಲೆ ಪರೀಕ್ಷಾ ಕೇಂದ್ರವನ್ನು ಹಂಚಿಕೆ ಮಾಡಲಾಗುವುದು.

ಅವಕಾಶ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಈಗಾಗಲೇ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿರುವ ವಿವರಗಳನ್ನು ಇದೇ 22ರ ಒಳಗೆ ಬದಲಿಸಲೂ ಅವಕಾಶ ಇದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.