ADVERTISEMENT

ರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಶಾಸಕಿ ಸೌಮ್ಯಾ ರೆಡ್ಡಿ ರಾಜೀನಾಮೆ

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಮಾರ್ಗಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2020, 6:36 IST
Last Updated 21 ಮಾರ್ಚ್ 2020, 6:36 IST
ಸೌಮ್ಯಾ ರೆಡ್ಡಿ
ಸೌಮ್ಯಾ ರೆಡ್ಡಿ    
""

ಬೆಂಗಳೂರು: ಹುಬ್ಬಳ್ಳಿ– ಅಂಕೋಲಾ ರೈಲ್ವೆ ಯೋಜನೆಯಿಂದ ಪರಿಸರಕ್ಕೆ ಹಾನಿಯುಂಟು ಆಗುವುದನ್ನು ಅರಿತು ಕೂಡ ಯೋಜನೆ ಜಾರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒಪ್ಪಿಗೆ ಸೂಚಿಸಿರುವುದನ್ನು ಖಂಡಿಸಿ ಶಾಸಕಿ ಸೌಮ್ಯಾ ರೆಡ್ಡಿರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆರಾಜೀನಾಮೆ ಸಲ್ಲಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ, ಅರಣ್ಯ ಸಚಿವರಿಗೆ ಪತ್ರ ಬರೆದಿದ್ದಾರೆ.

ಕಳೆದ ಸೋಮವಾರ ನಡೆದಿದ್ದ ಸಭೆಯಲ್ಲಿ ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಯನ್ನು ಕೈಬಿಡುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ದರು. ಆದರೂ, ಹಲವು ರಾಜಕೀಯ ಒತ್ತಡಗಳಿಗೆ ಮಣಿದಿರುವಅವರುಮತ್ತೆ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ಸೂಚಿಸಿರುವುದು ಖಂಡನೀಯ. ರಾಜ್ಯ ವನ್ಯಜೀವಿ ಮಂಡಳಿ ಅಸ್ತಿತ್ವದಲ್ಲಿದ್ದರೂ ಏನು ಪ್ರಯೋಜನವಿಲ್ಲದಂತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ADVERTISEMENT

ಈ ಯೋಜನೆ ಜಾರಿಗೆ ಬಂದರೆ ಮರಣಗಳು ಮಾರಣಹೋಮವಾಗುತ್ತದೆ. ಮುಂದೆ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳಿಗೆ ಸರ್ಕಾರವೇ ಹೊಣೆ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.