ADVERTISEMENT

ವಿಧಾನಸಭೆ ವಿರೋಧ ಪಕ್ಷದ ನಾಯಕ ಬೇಕಾಗಿದ್ದಾರೆ ಎಂದು ಜಾಹೀರಾತು ಕೊಟ್ಟ ಕಾಂಗ್ರೆಸ್!

ಟ್ವಿಟರ್‌ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಹಂಚಿಕೊಂಡು ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜುಲೈ 2023, 7:35 IST
Last Updated 1 ಜುಲೈ 2023, 7:35 IST
ಕರ್ನಾಟಕ ಕಾಂಗ್ರೆಸ್ ಹಂಚಿಕೊಂಡಿರುವ ಪೋಸ್ಟರ್
ಕರ್ನಾಟಕ ಕಾಂಗ್ರೆಸ್ ಹಂಚಿಕೊಂಡಿರುವ ಪೋಸ್ಟರ್   

ಬೆಂಗಳೂರು: ‘ತುರ್ತಾಗಿ ಕರ್ನಾಟಕ ವಿಧಾನಸಭೆಗೆ ವಿರೋಧಪಕ್ಷದ ನಾಯಕ ಬೇಕಾಗಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್‌ನ ಟ್ವಿಟರ್‌ ಘಟಕ ಶನಿವಾರ ಟ್ವಿಟರ್‌ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಹಂಚಿಕೊಂಡಿದೆ.

ಈ ಮೂಲಕ ವಿಧಾನಸಭೆ ಚುನಾವಣೆ ನಡೆದು ಇದುವರೆಗೆ ಬಿಜೆಪಿ ವಿರೋಧಪಕ್ಷದ ನಾಯಕನನ್ನು ನೇಮಿಸದಿದ್ದಕ್ಕೆ ವ್ಯಂಗ್ಯವಾಡಿದೆ.

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ, ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಬರೆದುಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.