ADVERTISEMENT

ಪಾದರಾಯನಪುರ ಗಲಭೆ ಅತ್ಯಂತ ದುರದೃಷ್ಟಕರ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2020, 11:16 IST
Last Updated 20 ಏಪ್ರಿಲ್ 2020, 11:16 IST
   

ಬೆಂಗಳೂರು: ಪಾದರಾಯನಪುರದಲ್ಲಿ ನಡೆದ ಗಲಭೆ ಅತ್ಯಂತ ದುರದೃಷ್ಟಕರ. ‌ಇಂತಹ ಘಟನೆಗಳು ಮರುಕಳಿಸದಂತೆ ತಡೆಯಬೇಕಾದರೆ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಘಟನೆ ಕುರಿತು ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ಪಾದರಾಯನಪುರ ಘಟನೆ ಖಂಡನೀಯ. ಇದಕ್ಕೆ ಕಾರಣರಾದವರನ್ನು ಶಿಕ್ಷೆಗೆ ಗುರಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ADVERTISEMENT

ಕೊರೊನಾ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಸಹಮತವಿದೆ. ಇದನ್ನು ನಾವು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ.

ಯಾರೇ ಆಗಲಿ, ಕಾನೂನಿಗೆ ಗೌರವ ಕೊಡಬೇಕು. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.