
ಪ್ರಜಾವಾಣಿ ವಾರ್ತೆ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಸಾಂಕೇತಿಕ ಚಿತ್ರ)
ಬೆಂಗಳೂರು: ಕರ್ನಾಟಕ ಪಬ್ಲಿಕ್ ಶಾಲೆಗಳೊಂದಿಗೆ ಇತರ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ, ಆ ಕಟ್ಟಡಗಳನ್ನು ಇತರೆ ಕಾರ್ಯಕ್ಕೆ ಬಳಸುವ ಸರ್ಕಾರದ ಪ್ರಸ್ತಾವಕ್ಕೆ ಎಐಡಿಎಸ್‌ಒ ವಿರೋಧ ವ್ಯಕ್ತಪಡಿಸಿದೆ.
ಸರ್ಕಾರಿ ಶಾಲಾ ಕಟ್ಟಡಗಳನ್ನು ಸ್ವಸಹಾಯ ಗುಂಪುಗಳಿಗೆ ನೀಡಲಾಗುವುದೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇದು ಸರ್ಕಾರದ ಏಕಪಕ್ಷೀಯ ಹಾಗೂ ಅಪ್ರಜಾತಾಂತ್ರಿಕ ನಡೆ ಎಂದು ಎಐಡಿಎಸ್‌ಒ ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿ ಅಜಯ್ ಕಾಮತ್ ಟೀಕಿಸಿದ್ದಾರೆ.
ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಕೈಬಿಡಬೇಕು, ಸರ್ಕಾರಿ ಶಾಲೆಯ ಆಸ್ತಿಯನ್ನು ಬೇರೆ ಉದ್ದೇಶಕ್ಕೆ ಬಳಸದೆ ಅಲ್ಲಿನ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು. ಜಾಹೀರಾತು ಸೇರಿದಂತೆ ಯಾವುದೇ ವ್ಯಾಪಾರದ ಉದ್ದೇಶಕ್ಕೆ ಸರ್ಕಾರಿ ಶಾಲೆಗಳನ್ನು ಬಳಸಬಾರದು ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.