ADVERTISEMENT

ನಾಳೆ ಕೆಪಿಟಿಸಿಎಲ್ ನೌಕರರಿಂದ ಕೆಲಸ ಬಹಿಷ್ಕಾರ

ವಿದ್ಯುಚ್ಛಕ್ತಿ ತಿದ್ದುಪಡಿ ಕಾಯ್ದೆಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 8:52 IST
Last Updated 9 ಆಗಸ್ಟ್ 2021, 8:52 IST
ವಿದ್ಯುತ್ ಪೂರೈಕೆ ಸಂಪರ್ಕ ಪರಿಶೀಲಿಸುತ್ತಿರುವುದು–ಸಾಂದರ್ಭಿಕ ಚಿತ್ರ
ವಿದ್ಯುತ್ ಪೂರೈಕೆ ಸಂಪರ್ಕ ಪರಿಶೀಲಿಸುತ್ತಿರುವುದು–ಸಾಂದರ್ಭಿಕ ಚಿತ್ರ   

ಬೆಂಗಳೂರು: 'ಖಾಸಗೀಕರಣಕ್ಕೆ ಪೂರಕವಾಗಿರುವ ವಿದ್ಯುಚ್ಛಕ್ತಿ ಕಾಯ್ದೆ (ತಿದ್ದುಪಡಿ) ಮಸೂದೆ-2021 ವಿರೋಧಿಸಿ ಆ.10ರಂದು ವಿದ್ಯುತ್ ಕ್ಷೇತ್ರದ ನೌಕರರು ಹಾಗೂ ಅಧಿಕಾರಿಗಳು ಕೆಲಸ ಬಹಿಷ್ಕರಿಸಲಿದ್ದೇವೆ' ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ನೌಕರರು ಮತ್ತು ಅಧಿಕಾರಿಗಳ ಒಕ್ಕೂಟದ ಅಧ್ಯಕ್ಷ ಟಿ.ಆರ್.ರಾಮಕೃಷ್ಣಯ್ಯ ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,' ನೂತನ ತಿದ್ದುಪಡಿ ಕಾಯ್ದೆ ವಿದ್ಯುತ್ ಕ್ಷೇತ್ರವನ್ನು ಅಪಾಯಕ್ಕೆ ಸಿಲುಕಿಸಲಿದೆ. ಸಾರ್ವಜನಿಕರಿಗೆ ಅಗತ್ಯವಾಗಿರುವ ವಿದ್ಯುತ್ ಸೌಲಭ್ಯ ಭವಿಷ್ಯದಲ್ಲಿ ದುಬಾರಿಯಾಗಲಿದೆ' ಎಂದು ಎಚ್ವರಿಸಿದರು.

'ವಿದ್ಯುತ್ ವಲಯ ಬಂಡವಾಳಶಾಹಿಗಳ ಅಧೀನಕ್ಕೆ ಒಳಪಟ್ಟರೆ, ಸಾರ್ವಜನಿಕರಿಗೆ ಮಾರಕವಾಗಿ ಪರಿಣಮಿಸಲಿದೆ. ಹಾಗಾಗಿ, ವಿದ್ಯುತ್ ವಲಯದ ಎಲ್ಲ ಸಿಬ್ಬಂದಿ ಕೆಲಸ‌ ಬಹಿಷ್ಕರಿಸುವ ಮೂಲಕ ಚಳವಳಿ ನಡೆಸಲಿದ್ದೇವೆ. ಆದರೆ, ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ' ಎಂದೂ ಹೇಳಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.