ADVERTISEMENT

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 16:13 IST
Last Updated 17 ಜುಲೈ 2021, 16:13 IST
   

ಬೆಂಗಳೂರು: ಪ್ರಸಕ್ತ ವರ್ಷದ ಬಜೆಟ್‌ ಘೋಷಣೆಯಂತೆ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.

‘ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ ‘3ಎ’ ವ್ಯಾಪ್ತಿಯಲ್ಲಿರುವ ಒಕ್ಕಲಿಗ, ವಕ್ಕಲಿಗ, ಹಳ್ಳಿಕಾರ್‌ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಟ್‌ಕಾರ್‌ ಒಕ್ಕಲಿಗ, ದಾಸ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್‌, ನಾಮಧಾರಿ ಗೌಡ, ಉಪ್ಪಿನ ಕೊಳಗ ಮತ್ತು ಉತ್ತಮ ಕೊಳಗ ಉಪ ಪಂಗಡಗಳ ಅಭಿವೃದ್ಧಿಗಾಗಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶಿಸಲಾಗಿದೆ’ ಎಂದು ಇಲಾಖೆ ತಿಳಿಸಿದೆ.

ಒಕ್ಕಲಿಗ ಅಭಿವೃದ್ಧಿ ನಿಗಮದ ಚಟುವಟಿಕೆಗಳಿಗೆ ₹ 500 ಕೋಟಿ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬಜೆಟ್‌ನಲ್ಲಿ ಪ್ರಕಟಿಸಿದ್ದರು. ಅದಕ್ಕೆ ಪೂರಕವಾಗಿ ಆದೇಶ ಹೊರಡಿಸಿದ್ದು, 2013ರ ಕಂಪನಿ ಕಾಯ್ದೆಯಡಿ ನಿಗಮವನ್ನು ನೋಂದಾಯಿಸಿ, ಅಗತ್ಯವಿರುವ ಹುದ್ದೆಗಳ ಸೃಜನೆಗೆ ಅವಕಾಶ ಕಲ್ಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.