ADVERTISEMENT

ಅಂಗಾಂಗ ವೈಫಲ್ಯ: 6 ಮಕ್ಕಳಿಗೆ ಯಕೃತ್ ಕಸಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2021, 19:47 IST
Last Updated 26 ಮಾರ್ಚ್ 2021, 19:47 IST

ಬೆಂಗಳೂರು: ಯಕೃತ್ತಿನ ಸಮಸ್ಯೆ ಎದುರಿಸುತ್ತಿದ್ದ ಆರು ಮಕ್ಕಳಿಗೆ ಅವರ ಪಾಲಕರೇ ಅಂಗಾಂಗ ದಾನ ಮಾಡಿದ್ದು, ಆಸ್ಟರ್‌ ಆರ್‌ವಿ ಆಸ್ಪತ್ರೆಯ ವೈದ್ಯರು ಕಸಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

3 ವರ್ಷದಿಂದ 10 ವರ್ಷದೊಳಗಿನ ಮಕ್ಕಳು ಅಂಗಾಂಗ ಕಸಿಗೆ ಒಳಪಟ್ಟಿದ್ದಾರೆ. ಇವರಲ್ಲಿ ನಾಲ್ಕು ಮಂದಿ ಬಾಲಕಿಯರು ಹಾಗೂ ಇಬ್ಬರು ಬಾಲಕರು. ಆರು ಕುಟುಂಬಗಳ ಚಿಕಿತ್ಸಾ ವೆಚ್ಚವನ್ನು ಕಾರ್ಪೊರೇಟ್‌ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಹಾಗೂ ದಾನಿಗಳ ನೆರವಿನಿಂದ ಆಸ್ಪತ್ರೆ ಭರಿಸಿದೆ.

‘ಕೋವಿಡ್‌ ಕಾರಣ ಅಂಗಾಂಗ ದಾನ ಪ್ರಕ್ರಿಯೆಗೆ ಹಿನ್ನಡೆಯಾಗಿದೆ. ಮಕ್ಕಳು ಗಂಭೀರ ಸ್ವರೂಪದ ಯಕೃತ್ ಸಮಸ್ಯೆಯನ್ನು ಎದುರಿಸುತ್ತಿದ್ದರು. ಕಸಿ ಶಸ್ತ್ರಚಿಕಿತ್ಸೆಯನ್ನು ವಿಳಂಬ ಮಾಡಿದ್ದಲ್ಲಿ ಅವರ ಜೀವಕ್ಕೆ ಅಪಾಯವಾಗುವ ಸಾಧ್ಯತೆಗಳಿದ್ದವು. ಹೀಗಾಗಿ, ಅವರ ಪಾಲಕರಿಂದಲೇ ಅಂಗಾಂಗ ಪಡೆದು ಕಸಿ ಮಾಡಲಾಯಿತು. ಈಗ ಎಲ್ಲ ಮಕ್ಕಳು ಚೇತರಿಸಿಕೊಂಡಿದ್ದಾರೆ’ ಎಂದು ಆಸ್ಪತ್ರೆಯ ಕಸಿ ಶಸ್ತ್ರಚಿಕಿತ್ಸಕ ಡಾ. ರಾಜೀವ್ ಲೋಚನ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.