ADVERTISEMENT

ನಮ್ಮ ಧ್ವಜ ನಮ್ಮ ಹೆಮ್ಮೆ: ಟ್ವಿಟರ್‌ ಅಭಿಯಾನ, ಕೆಲ ಮಂತ್ರಿಗಳ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 14:30 IST
Last Updated 2 ನವೆಂಬರ್ 2020, 14:30 IST
ಚಿತ್ರ ಕೃಪೆ: ಕರವೇ
ಚಿತ್ರ ಕೃಪೆ: ಕರವೇ   

ಬೆಂಗಳೂರು: ರಾಜ್ಯದ ಕೆಲ ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ಧ್ವಜಾರೋಹಣಕ್ಕೆ ಅಡ್ಡಿಪಡಿಸಿದ ಘಟನೆಗಳು ವರದಿಯಾದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ಸೋಮವಾರ ಟ್ವೀಟರ್‌ನಲ್ಲಿ #ನಮ್ಮ_ಧ್ವಜ_ನಮ್ಮ_ಹೆಮ್ಮೆ ಅಭಿಯಾನ ಆರಂಭಿಸಿವೆ.

ಟ್ವೀಟರ್‌ನಲ್ಲಿ #ನಮ್ಮ_ಧ್ವಜ_ನಮ್ಮ_ಹೆಮ್ಮೆ ಅಭಿಯಾನ ಟ್ರೆಂಡ್‌ ಆಗಿದ್ದು ಕನ್ನಡ ಧ್ವಜಾರೋಹಣ ಮಾಡುವುದಕ್ಕೆ ಸಾಕಷ್ಟು ಬೆಂಬಲ ವ್ಯಕ್ತವಾಗಿದೆ. ನಾಡ ಧ್ವಜ ಹಾರಿಸಲು ಕೆಲ ಸಚಿವರು ಅಡ್ಡಿಪಡಿಸಿದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ತಜ್ಞರ ಸಮಿತಿಯನ್ನು ಆಧರಿಸಿ ನಾಡಧ್ವಜವನ್ನು ವಿನ್ಯಾಸ ಮಾಡಿ ಅಂಗೀಕಾರಕ್ಕಾಗಿ ಕೇಂದ್ರಸರ್ಕಾರಕ್ಕೆ ಕಳಿಸಿದ್ದೆ. ಮೂರು ವರ್ಷಗಳಾದರೂ ಅದಕ್ಕೆ ಅಂಗೀಕಾರ ನೀಡದೆ ಇರುವುದು,
ಕರ್ನಾಟಕದ ನಾಡಧ್ವಜದ ಬಗ್ಗೆ ಬಿಜೆಪಿ ಹೊಂದಿರುವ ಪೂರ್ವಗ್ರಹಕ್ಕೆ ಸಾಕ್ಷಿ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ADVERTISEMENT

ರಾಜ್ಯೋತ್ಸವದ ದಿನವಾದ ನಿನ್ನೆ ಹಲವು ಜಿಲ್ಲಾಕೇಂದ್ರಗಳಲ್ಲಿ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡಧ್ವಜ ಹಾರಿಸದೇ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲಾಗಿದೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಕನ್ನಡಧ್ವಜ ಹಾರಿಸಿರುವಾಗ ಜಿಲ್ಲಾ ಉಸ್ತುವಾರಿ ಸಚಿವರು ಬಾವುಟ ಹಾರಿಸದಂತೆ ತಡೆದ ಶಕ್ತಿ ಯಾವುದು? ಎಂದು ಕನ್ನಡ ರಕ್ಷಣ ವೇದಿಕೆ ಟ್ವೀಟ್‌ ಮಾಡಿದೆ.

ರಾಜ್ಯದ ಕೆಲ ಮಂತ್ರಿಗಳ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು ನಾಡ ಧ್ವಜಾರೋಹಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.