ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ರಣದೀಪ್ ಸಿಂಗ್ ಸುರ್ಜೆವಾಲಾ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಚರ್ಚೆ
ಮೈಸೂರು: 'ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರುತ್ತದೆ. ನನ್ನ ಹಾಗೂ ಶಿವಕುಮಾರ್ ನಡುವೆ ಯಾರೇ ತಂದು ಹಾಕುವ ಪ್ರಯತ್ನ ಮಾಡಿದರೂ ಪ್ರಯೋಜನವಿಲ್ಲ. ನಾವಿಬ್ಬರೂ ಒಗ್ಗಟ್ಟಾಗಿ ಇದ್ದೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಅವರು ' ನಮ್ಮ ಬಗ್ಗೆ ಮಾತನಾಡುವ ಶ್ರೀರಾಮುಲು ಎಷ್ಟು ಚುನಾವಣೆ ಸೋತಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ನಾನು ಈ ಬಾರಿಯ ದಸರಾ ಉದ್ಘಾಟಿಸುವುದು ಸತ್ಯ' ಎಂದರು.
'ರಣದೀಪಸಿಂಗ್ ಸುರ್ಜೇವಾಲ ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಅವರು ನಮ್ಮ ಪಕ್ಷದ ಶಾಸಕರ ಕಷ್ಟ-ಸುಖ ಕೇಳುತ್ತಾರೆ. ಅದರಲ್ಲಿ ವಿಶೇಷವೇನಿಲ್ಲ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.