ನವದೆಹಲಿ: ಕರ್ನಾಟಕ ಹಾಗೂ ಕನ್ನಡಿಗರ ಹಿತ ಕಾಪಾಡಲು ನಾವು ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ಮಾಡಲು ಇಲ್ಲಿಗೆ ಬಂದ ಅವರು ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದರು.
ನಮ್ಮ ಪ್ರತಿಭಟನೆಗೆ ಕೇಂದ್ರ ಸರ್ಕಾರ ಓಗೊಡುತ್ತದೆ ಎಂದು ನಾವು ಭಾವಿಸಿದ್ದೇವೆ ಎಂದರು.
ಬಳಿಕ ಪ್ರತಿಭಟನೆ ನಡೆಯುವ ಜಂತರ್‌ಮಂತರ್‌ಗೆ ಬಂದ ಅವರನ್ನು ಶಾಸಕರು ಹಾಗೂ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು. ಈ ವೇಳೆ ಎದುರುಗೊಂಡ ಶಾಸಕ ಲಕ್ಷ್ಮಣ ಸವದಿ ಅವರಿಗೆ ಹಸ್ತಲಾಘವ ಮಾಡಿ ಭುಜ ತಟ್ಟಿದರು.
ಧರಣಿ ವೇಳೆ ಸಿದ್ದರಾಮಯ್ಯ ಅವರ ಪಕ್ಕವೇ ಸವದಿ ಕುಳಿತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.