ADVERTISEMENT

ಹೊರಗುತ್ತಿಗೆ ಸಿಬ್ಬಂದಿ ಸಕ್ರಮ ಪ್ರಸ್ತಾವವಿಲ್ಲ: ವಿದ್ಯುತ್ ಪ್ರಸರಣ ನಿಗಮ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2025, 23:30 IST
Last Updated 26 ಸೆಪ್ಟೆಂಬರ್ 2025, 23:30 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಹೊರಗುತ್ತಿಗೆ ಸಿಬ್ಬಂದಿಯನ್ನು ಸಕ್ರಮಗೊಳಿಸುವ ಯಾವುದೇ ಕರಡು ಅಧಿಸೂಚನೆ ಸಿದ್ದಪಡಿಸಿಲ್ಲ ಹಾಗೂ ಇಂತಹ ಕರಡು ಅಧಿಸೂಚನೆ ಸಿದ್ದಪಡಿಸುವ ಪ್ರಸ್ತಾವನೆಯು ನಿಗಮದ ಮುಂದೆ ಇಲ್ಲ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸ್ಪಷ್ಟನೆ ನೀಡಿದೆ.

ADVERTISEMENT

ಸೇವಾ ಭದ್ರತೆ ಒದಗಿಸುವಂತೆ ಹೊರಗುತ್ತಿಗೆ ನೌಕರರು ಕೋರಿರುವ ಪ್ರಸ್ತಾವನೆಯನ್ನು ಪರಿಶೀಲಿಸಲು ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಾಲ್ವರು ಸದಸ್ಯರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.