ADVERTISEMENT

ಕೊರೊನಾ ವೈರಸ್ ಭೀತಿ: ರಾಜ್ಯದಲ್ಲಿ 7, 8 ಮತ್ತು 9ನೇ ತರಗತಿ ಪರೀಕ್ಷೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2020, 6:51 IST
Last Updated 15 ಮಾರ್ಚ್ 2020, 6:51 IST
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್   
""

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಓರ್ವ ವ್ಯಕ್ತಿಯನ್ನು ಬಲಿಪಡೆದುಕೊಂಡಿರುವ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ರಾಜ್ಯಾದಾದ್ಯಂತ ಕೊರೊನಾ ವೈರಸ್ ಭೀತಿ ಉಂಟಾಗಿರುವುದರಿಂದಾಗಿ 7, 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಪ್ರಕಟಣೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ಈಗಾಗಲೇ 1ರಿಂದ 6ನೇ ತರಗತಿವರೆಗೆ ರಜೆ ಘೋಷಿಸಲಾಗಿದ್ದು, ಪರೀಕ್ಷಾ ಪೂರ್ವ ಸಿದ್ಧತಾ ರಜೆಯಲ್ಲಿರುವ 7ರಿಂದ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ತಿಳಿಸಲಾಗಿತ್ತು. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದರಿಂದ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಂಭವವಿರುವುದರಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ 7ರಿಂದ 9ನೇ ತರಗತಿವರೆಗಿನ ಪರೀಕ್ಷೆಯನ್ನು ಮಾರ್ಚ್ 31ರವರೆಗೆ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.

ADVERTISEMENT

ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಘೋಷಿಸಲಾಗುವುದು. ಆದರೆ 10ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಗಿದಿಯಂತೆ ಮಾರ್ಚ್​ 27ರಿಂದ ಏಪ್ರಿಲ್ 9ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಆಯಾ ದಿನಗಳಂದು ಮಾತ್ರ ವಿದ್ಯಾರ್ಥಿಗಳು ಹಾಜರಾಗುವಂತೆ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.