ADVERTISEMENT

ರಾಜ್ಯದಲ್ಲಿ ಆಮ್ಲಜನಕ ಕೊರತೆ ಇಲ್ಲ: ಬಿಜೆಪಿ ಟ್ವೀಟ್‌

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 10:10 IST
Last Updated 19 ಏಪ್ರಿಲ್ 2021, 10:10 IST
   

ಬೆಂಗಳೂರು: ಕೋವಿಡ್‌ ವಿರುದ್ಧ ರಾಜ್ಯ ಸರ್ಕಾರ ಸಮರ್ಥವಾಗಿ ಹೋರಾಡುತ್ತಿದ್ದು, ವೈದ್ಯಕೀಯ ಆಮ್ಲಜನಕದ ಕೊರತೆ ಇಲ್ಲ ಎಂದು ರಾಜ್ಯ ಬಿಜೆಪಿ ಹೇಳಿದೆ.

ರಾಜ್ಯದಲ್ಲಿ ಏಳು ವೈದ್ಯಕೀಯ ಆಮ್ಲಜನಕ ತಯಾರಿಕಾ ಘಟಕಗಳು ದಿನಕ್ಕೆ 812 ಟನ್‌ ಆಮ್ಲಜನಕ ಉತ್ಪಾದಿಸುತ್ತಿವೆ. ಏ.18 ರಂದು 305 ಟನ್‌ ಆಮ್ಲಜನಕ ಬಳಕೆಯಾಗಿದ್ದು, 19,417 ಸಿಲಿಂಡರ್‌ಗಳು ಲಭ್ಯ ಇವೆ. ಆದ್ದರಿಂದ ಯಾರೂ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಟ್ವೀಟ್‌ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT