ADVERTISEMENT

ರಾಜ್ಯ ಘೋಷಿಸಿದ ಪ್ಯಾಕೇಜ್ ಹಣ ಜನರನ್ನು ತಲುಪಿಲ್ಲ: ಡಿಕೆಶಿ, ಸಿದ್ದರಾಮಯ್ಯ ಗರಂ

​ಪ್ರಜಾವಾಣಿ ವಾರ್ತೆ
Published 20 ಮೇ 2020, 7:12 IST
Last Updated 20 ಮೇ 2020, 7:12 IST
ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬುಧವಾರ ಕೆಪಿಸಿಸಿ ವತಿಯಿಂದ ಪ್ರತಿಭಟನೆ
ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬುಧವಾರ ಕೆಪಿಸಿಸಿ ವತಿಯಿಂದ ಪ್ರತಿಭಟನೆ   

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿದ ಕೊರೊನಾ ಪ್ಯಾಕೇಜ್ ಹಣ ಜನರನ್ನು ತಲುಪಿಲ್ಲ. ಕೇಂದ್ರ ಘೋಷಿಸಿದ ₹20 ಲಕ್ಷ ಕೋಟಿ ಪ್ಯಾಕೇಜ್ ಸಹ ಬೋಗಸ್ ಎಂದು ತಜ್ಞರು ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.

ಎಪಿಎಂಸಿ ಮತ್ತು ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಆಡಳಿತ ಸಮಿತಿ ರಚಿಸುವ ಸರ್ಕಾರದ ನಿರ್ಧಾರಗಳನ್ನು ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬುಧವಾರ ಕೆಪಿಸಿಸಿ ವತಿಯಿಂದ ನಡೆಸಲಾದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನವಿರೋಧಿ ಕ್ರಮಗಳನ್ನು ವಿರೋಧಿಸಿ ಪಕ್ಷದ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ರಾಜ್ಯ ಸರ್ಕಾರ ವಲಸೆ ಕಾರ್ಮಿಕರನ್ನು ಸರಿಯಾಗಿ ನೋಡಿಕೊಂಡಿದ್ದರೆ ಅವರು ಕಷ್ಟಕ್ಕೆ ಸಿಲುಕುತ್ತಿರಲಿಲ್ಲ, ಅವರು ಊರಿಗೆ ತೆರಳುತ್ತಲೂ ಇರಲಿಲ್ಲ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.