ADVERTISEMENT

ಪಾದರಾಯನಪುರ: 84 ಪೊಲೀಸರ ಕೊರೊನಾ ವರದಿ ನೆಗಟಿವ್

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2020, 20:00 IST
Last Updated 27 ಏಪ್ರಿಲ್ 2020, 20:00 IST
   

ಬೆಂಗಳೂರು: ಪಾದರಾಯನಪುರ ಗಲಾಟೆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಹಾಗೂ ಗಲಾಟೆ ಆರೋಪಿಗಳನ್ನು ಬಂಧಿಸಿದ ತಂಡದಲ್ಲಿದ್ದ 84 ಪೊಲೀಸರ ವೈದ್ಯಕೀಯ ಪರೀಕ್ಷಾ ವರದಿ ಬಂದಿದ್ದು, ಎಲ್ಲರದ್ದೂ ನೆಗಟಿವ್ ಫಲಿತಾಂಶ ಬಂದಿರುವುದಾಗಿ ಮೂಲಗಳು ತಿಳಿಸಿವೆ.

ಗಲಾಟೆ ಆರೋಪಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದರಿಂದ ಪೊಲೀಸರಲ್ಲೂ ಆತಂಕ ಶುರುವಾಗಿತ್ತು. ಹೀಗಾಗಿ 32 ಪೊಲೀಸರನ್ನು ಕ್ವಾರಂಟೈನ್‌ನಲ್ಲಿಟ್ಟು, 200ಕ್ಕೂ ಹೆಚ್ಚು ಪೊಲೀಸರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು.

‘ಸಿಸಿಬಿಯ 84 ಪೊಲೀಸರ ಫಲಿತಾಂಶ ಮಾತ್ರ ಬಂದಿದೆ. ಪಶ್ಚಿಮ ಹಾಗೂ ಕೇಂದ್ರ ವಿಭಾಗದ ಪೊಲೀಸರ ತಪಾಸಣಾ ವರದಿ ಬರುವುದು ಬಾಕಿ ಇದೆ' ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.