ADVERTISEMENT

ಪಾದರಾಯನಪುರ ವಾರ್ಡ್ ಸದಸ್ಯ ಇಮ್ರಾನ್‌ ಪಾಷಾ ಮತ್ತೆ 3 ದಿನ ಪೊಲೀಸ್‌ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 10:59 IST
Last Updated 9 ಜೂನ್ 2020, 10:59 IST
ಪಾದರಾಯನಪುರ ವಾರ್ಡ್ ಸದಸ್ಯ ಇಮ್ರಾನ್ ಪಾಷಾ
ಪಾದರಾಯನಪುರ ವಾರ್ಡ್ ಸದಸ್ಯ ಇಮ್ರಾನ್ ಪಾಷಾ   

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬಿಬಿಎಂಪಿಯ ಪಾದರಾಯನಪುರ ವಾರ್ಡ್ ಸದಸ್ಯ ಇಮ್ರಾನ್ ಪಾಷಾ ಮತ್ತು 22 ಮಂದಿಯನ್ನು ನ್ಯಾಯಾಧೀಶರು ಮತ್ತೆ ಮೂರು ದಿನಗಳ ಅವಧಿಗೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಪಾಷಾ ಮತ್ತು ಅವರ ಬೆಂಬಲಿಗರು ಕೋವಿಡ್ ಭೀತಿ ಮರೆತು, ವ್ಯಕ್ತಿಗತ ಅಂತರ ಇಲ್ಲದೆ ಗುಂಪುಗೂಡಿ ಸಂಭ್ರಮಾಚರಣೆ ಮಾಡಿ ಕಾನೂನು ಉಲ್ಲಂಘಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದರು. ವಿಡಿಯೊ ಕಾನ್ಫರೆನ್ಸ್ ಮೂಲಕ ಪಾಷಾ ಮತ್ತು ಇತರ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದರು.

ಇದೀಗ ಎಲ್ಲ ಆರೋಪಿಗಳನ್ನು ಹೋಟೆಲ್‌ವೊಂದರಲ್ಲಿ ಕ್ವಾರಂಟೈನ್‌ ಮಾಡಲಾಗಿದ್ದು, ಎಲ್ಲರಿಗೂ ಕೋವಿಡ್​ ತಪಾಸಣೆ ನಡೆಸಲಾಗಿದೆ. ಇನ್ನೆರಡು ದಿನಗಳಲ್ಲಿ ತಪಾಸಣಾ ವರದಿ ಬರಲಿದೆ. ಒಂದು ವೇಳೆ ವರದಿಯಲ್ಲಿ ಸೋಂಕು ದೃಢಪಟ್ಟರೆ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.