ಕ್ಯಾಂಪ್ಕೊ
ಮಂಗಳೂರು: ಇಲ್ಲಿಯ ಕೇಂದ್ರೀಯ ಅಡಿಕೆ ಮತ್ತು ಕೊಕ್ಕೊ ಮಾರುಕಟ್ಟೆ, ಸಂಸ್ಕರಣ ಸಹಕಾರ ನಿಯಮಿತ (ಕ್ಯಾಂಪ್ಕೊ) ರಾಷ್ಟ್ರೀಯ ರಕ್ಷಣಾ ನಿಧಿಗೆ ₹5 ಕೋಟಿ ದೇಣಿಗೆ ನೀಡಿದೆ.
‘ಪೆಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ದೇಶದ ಗಡಿ ರಕ್ಷಣೆಗಾಗಿ ಹೋರಾಡುತ್ತಿರುವ ಯೋಧರಿಗೆ ನೆರವಾಗಲು ಕ್ಯಾಂಪ್ಕೊ ₹5 ಕೋಟಿ ಕೊಡುಗೆ ನೀಡುವ ಮೂಲಕ ರಾಷ್ಟ್ರದ ಹಿತ ಕಾಪಾಡುವಲ್ಲಿ ತನ್ನ ಬದ್ಧತೆಯನ್ನು ತೋರಿಸಿದೆ’ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
‘ಕ್ಯಾಂಪ್ಕೊ ಯಾವಾಗಲೂ ರಾಷ್ಟ್ರೀಯ ಹಿತ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಮುಂಚೂಣಿಯಲ್ಲಿರುವ ರೈತರ ಸಹಕಾರಿ ಸಂಸ್ಥೆಯಾಗಿದೆ. ಈ ಹಿಂದೆಯೂ, ನೈಸರ್ಗಿಕ ವಿಕೋಪಗಳು ಮತ್ತು ರಾಷ್ಟ್ರೀಯ ತುರ್ತು ಪರಿಸ್ಥಿತಿಗಳ ಸಮಯದಲ್ಲಿ ನಾವು ಪ್ರಧಾನಮಂತ್ರಿ ಪರಿಹಾರ ನಿಧಿಗೆ ಆರ್ಥಿಕ ಬೆಂಬಲ ನೀಡಿದ್ದೇವೆ. ದೇಶದ ಸಮಸ್ತ ರೈತರು ಒಗ್ಗಟ್ಟನ್ನು ಪ್ರದರ್ಶಿಸಿ, ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.