ADVERTISEMENT

ಉಗ್ರರ ದಾಳಿ: ಕೇಂದ್ರ ಸರ್ಕಾರ ತಕ್ಷಣ ಸರ್ವ ಪಕ್ಷಗಳ ಸಭೆ ಕರೆಯಬೇಕು; ಖರ್ಗೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 8:19 IST
Last Updated 23 ಏಪ್ರಿಲ್ 2025, 8:19 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ಬೆಂಗಳೂರು: ' ಕಾಶ್ಮೀರದ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತಕ್ಷಣ ಸರ್ವ ಪಕ್ಷಗಳ ಸಭೆ ಕರೆಯಬೇಕು' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಘಟನೆ ಕುರಿತು ಚರ್ಚಿಸಲು ಗುರುವಾರ (ಏಪ್ರಿಲ್ 24) ಎಳಗ್ಗೆ 11 ಗಂಟೆಗೆ ಪಕ್ಷದ ಸಿಡಬ್ಲ್ಯುಸಿ ಸಭೆ ಕರೆಯಲಾಗಿದೆ' ಎಂದರು.

'ಈ ಸಂಕಟದ ವೇಳೆಯಲ್ಲಿ ನಾವೆಲ್ಲರೂ ಒಂದಾಗಿದ್ದೇವೆ. ಕೇಂದ್ರ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ಕೊಡುತ್ತೇವೆ' ಎಂದರು.

ADVERTISEMENT

'ಕೇಂದ್ರ ಸರ್ಕಾರ ಬಿಗಿಯಾದ ಕ್ರಮ ತಕ್ಷಣ ತೆಗೆದುಕೊಳ್ಖಬೇಕು. ಉಗ್ರರ ಹುಟ್ಟಡಗಿಸುವ ಮೂಲಕ ಎಚ್ಚರಿಕೆಯ ಸಂದೇಶ ಕೊಡಬೇಕು' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.