ADVERTISEMENT

Pahalgam Attack ಭಯೋತ್ಪಾದಕರ ವಿರುದ್ಧ ಕೇಂದ್ರದ ಕ್ರಮಕ್ಕೆ ಬೆಂಬಲ: ಶರದ್‌ ಪವಾರ್

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2025, 14:33 IST
Last Updated 25 ಏಪ್ರಿಲ್ 2025, 14:33 IST
<div class="paragraphs"><p>ಶರದ್‌ ಪವಾರ್</p></div>

ಶರದ್‌ ಪವಾರ್

   

ಬೆಳಗಾವಿ: ‘ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಕೊಂದ ಭಯೋತ್ಪಾದಕರ ವಿರುದ್ಧ ತೆಗೆದುಕೊಳ್ಳುವ ಕ್ರಮದ ವಿಷಯದಲ್ಲಿ ನಾವು ಕೇಂದ್ರ ಸರ್ಕಾರದ ಜೊತೆ ಇರುತ್ತೇವೆ’ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್‌ ಪವಾರ್ ಹೇಳಿದರು.

‘ಎಲ್ಲ ರಾಜಕೀಯ ಪಕ್ಷಗಳು ಈಗ ಕೇಂದ್ರ ಸರ್ಕಾರದ ಜತೆ ನಿಲ್ಲುವ ಸಮಯ ಬಂದಿದೆ. ಭಯೋತ್ಪಾದಕರ ವಿರುದ್ಧ ತೆಗೆದುಕೊಳ್ಳುವ ಪ್ರತೀಕಾರದ ಕ್ರಮಕ್ಕೆ ನಾವು ಸರ್ಕಾರಕ್ಕೆ ಬೆಂಬಲ ನೀಡಿದ್ದೇವೆ. ಇದರಲ್ಲಿ ಯಾವುದೇ ರಾಜಿ ಇಲ್ಲ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

‘ಇದು ದೇಶದ ಮೇಲೆ ನಡೆದ ದಾಳಿಯಾಗಿದ್ದು, ನಾವು ರಾಜಕೀಯ ಬದಿಗಿಡುತ್ತೇವೆ. ಕೇಂದ್ರವು ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.