ADVERTISEMENT

Operation Sindoor: ನಮ್ಮ ಸೇನೆ ನಮ್ಮ ಹೆಮ್ಮೆ-ಸಚಿವ ಜಮೀರ್ ಅಹಮದ್ ಖಾನ್

​ಪ್ರಜಾವಾಣಿ ವಾರ್ತೆ
Published 7 ಮೇ 2025, 9:02 IST
Last Updated 7 ಮೇ 2025, 9:02 IST
ಜಮೀರ್ ಅಹಮದ್ ಖಾನ್ 
ಜಮೀರ್ ಅಹಮದ್ ಖಾನ್    

ಹೊಸಪೇಟೆ (ವಿಜಯನಗರ): ಪಹಲ್ಗಾಮ್ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ್' ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಬಳ್ಳಾರಿ, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಈ ಕುರಿತು ಬುಧವಾರ ಹೇಳಿಕೆ ನೀಡಿರುವ ಅವರು, ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲಾಗಿದೆ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ ಪಾಕಿಸ್ತಾನಕ್ಕೆ ಉಳಿಗಾಲ ಇಲ್ಲ ಎಂಬ ಸಂದೇಶ ರವಾನೆಯಾಗಿದೆ. 'ನಮ್ಮ ಸೇನೆ ನಮ್ಮ ಹೆಮ್ಮೆ' ಎಂದು ಹೇಳಿದ್ದಾರೆ.

ಭಾರತದಲ್ಲಿ ಅಶಾಂತಿ ಸೃಷ್ಟಿಸುವ ಹಾಗೂ ಭಯೋತ್ಪಾದಕ ಕೃತ್ಯ ಎಸಗುವ ಉಗ್ರಗಾಮಿ ಸಂಘಟನೆಗಳ ಹುಟ್ಟಡಗಿಸುವ ಹೋರಾಟದಲ್ಲಿ ನಾವೆಲ್ಲರೂ ಕೇಂದ್ರ ಸರ್ಕಾರದ ಜತೆ ಇದ್ದೇವೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.