ಸಿದ್ದರಾಮಯ್ಯ
ಬೆಂಗಳೂರು: ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಕನ್ನಡಿಗ ವ್ಯಕ್ತಿ ಬಲಿಯಾಗಿರುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸರ್ಕರದ ಉನ್ನತ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ್ದಾರೆ.
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ನೆರವಾಗಲು ತಕ್ಷಣವೇ ಕ್ರಮ ತೆಗೆದುಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆಯೇ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಕರಮ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಮೃತ ವ್ಯಕ್ತಿಯ ಶವವನ್ನು ತ್ವರಿತವಾಗಿ ತರಲು ಅಗತ್ಯ ವ್ಯವಸ್ಥೆ ಮಾಡಿ ಮತ್ತು ರಾಜ್ಯದಿಂದ ಬರುವ ತಂಡಕ್ಕೆ ಅಗತ್ಯ ನೆರವು ನೀಡಿ ಎಂದು ದೆಹಲಿ ನಿವಾಸಿ ಆಯುಕ್ತರಿಗೂ ಸೂಚಿಸಿದ್ದಾರೆ.
ಈ ಸಂಬಂಧ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಒಂದು ತಂಡವು ಕಾಶ್ಮೀರಕ್ಕೆ ಹೊರಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.