ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತು ಕಾಂಗ್ರೆಸ್ ನಾಯಕರು ನೀಡಿರುವ ಹೇಳಿಕೆಗಳ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಪಾಪಿ ಪಾಕಿಸ್ತಾನದ ಮತಾಂಧ ಮುಸ್ಲಿಂ ಉಗ್ರರಿಗಾಗಿ ಕಾಂಗ್ರೆಸ್ ಪಕ್ಷದ ಹೃದಯಗಳು ಮಿಡಿಯುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಗೆ ಹಿಂದುತ್ವೇ ಕಾರಣ ಎಂದು ರಾಬರ್ಟ್ ವಾದ್ರಾ ಹೇಳಿದ್ದಾರೆ, ಯುದ್ದದ ಅವಶ್ಯಕತೆ ಇಲ್ಲ. ನಾವು ಶಾಂತಿಯ ಪರ ಎಂದಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ಧರ್ಮದಲ್ಲೂ ಹಾದಿ ತಪ್ಪಿದವರಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ ಎಂದು ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ, ದಾಳಿಕೋರರು ಧರ್ಮ ಕೇಳಿ ಕೂರುತ್ತಾರಾ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಪ್ರಶ್ನಿಸಿದ್ದಾರೆ ಎಂದು ಅಶೋಕ ವಾಗ್ದಾಳಿ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.