ADVERTISEMENT

ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 13:35 IST
Last Updated 23 ಏಪ್ರಿಲ್ 2025, 13:35 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿ ಭಯೋತ್ಪಾದಕರು ಮಂಗಳವಾರ (ಏ. 22) ನಡೆಸಿದ ಗುಂಡಿನ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ₹ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.‌

ರಾಜ್ಯದ ಮೂವರು ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಶಿವಮೊಗ್ಗದ ಮಂಜುನಾಥ್‌ ರಾವ್‌, ಬೆಂಗಳೂರಿನ ಭರತ್‌ ಭೂಷಣ್‌ ಹಾಗೂ ಮಧುಸೂದನ್‌ ರಾವ್‌ (ತೆಲಂಗಾಣ ಮೂಲ) ಉಗ್ರರ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ.

ಈ ಘಟನೆಯಲ್ಲಿ 26 ಜನ ಮೃತಪಟ್ಟು, 17 ಜನ ಗಾಯಗೊಂಡಿದ್ದಾರೆ. ಕೃತ್ಯ ಎಸಗಿದವರ ಸದೆಬಡಿಯಲು ಸೇನೆ ಕಾರ್ಯಾಚರಣೆ ಆರಂಭಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.