ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿ, ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕಾಶ್ಮೀರಿ ವಿದ್ಯಾರ್ಥಿಗಳಾದ ಅಮೀರ್ ವಾನಿ, ತಾಲಿಬ್ ಮಜೀದ್ ಮತ್ತು ಬಾಸಿತ್ ಸೋಫಿ ಅವರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಮಂಗಳವಾರ ತಮ್ಮ ವಶಕ್ಕೆ ಪಡೆದಿದ್ದಾರೆ.
ಹೆಚ್ಚಿನ ವಿಚಾರಣೆಗೆ ಒಳಪಡಿಸುವುದಕ್ಕಾಗಿ ಅವರನ್ನು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಂತರ ಹುಬ್ಬಳ್ಳಿಗೆ ಕರೆದುಕೊಂಡು ಹೋಗಿದ್ದಾರೆ.
ಇದನ್ನೂ ಓದಿ:ಪಾಕ್ ಪರ ಘೋಷಣೆ: ಆರೋಪಿಗಳು ಹಿಂಡಲಗಾ ಜೈಲಿಗೆ
ಆರೋಪಿಗಳನ್ನು ಫೆ. 18ರಂದು ಇಲ್ಲಿನ ಕಾರಾಗೃಹಕ್ಕೆ ಕರೆತರಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.