ಸಂತೋಷ್ ಲಾಡ್
ಮೈಸೂರು: ‘ಭಾರತದಲ್ಲಿದ್ದುಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವವರನ್ನು ನಾನು ಬೆಂಬಲಿಸುವುದಿಲ್ಲ. ನನ್ನ ಮನೆಯವರೇ ಹಾಗೆ ಕೂಗಿದ್ದರೂ ಅವರ ಮೇಲೆ ಕ್ರಮವಾಗಬೇಕು’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಇಲ್ಲಿನ ವಿಮಾನನಿಲ್ದಾಣದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿ, ‘ಅವರು ಯಾಕೆ ಕೂಗುತ್ತಿದ್ದಾರೆ ಎಂಬುದಕ್ಕೆ ನೂರಾರು ಕಾರಣಗಳಿವೆ. ಅವರ ಮೇಲೆ ಆಗಿರುವ ಅತ್ಯಾಚಾರಗಳೇನು ಕಡಿಮೆಯೇ? ಅದನ್ನೂ ನಾವು ನೋಡಬೇಕು ತಾನೇ? ಕರ್ನಾಟಕದಲ್ಲಿ ಮಾತ್ರವಲ್ಲ, ದೇಶದ ನಾನಾ ಭಾಗಗಳಲ್ಲೂ ಆ ರೀತಿಯ ಘಟನೆಗಳು ನಡೆದಿವೆ. ಯಾಕೆ ನಡೆಯುತ್ತಿದೆ ಎಂಬುದಕ್ಕೆ ನಾನು ಹೊಣೆಗಾರ ಅಲ್ಲ’ ಎಂದು ಹೇಳಿದರು.
‘ಇವತ್ತಿನ ಪರಿಸ್ಥಿತಿಯಲ್ಲಿ ವಿಷಯಾಂತರಗಳು ಆಗಬಾರದು’ ಎಂದರು.
‘ಪಾಕಿಸ್ತಾನದ ಒಳಗೆ ನುಗ್ಗಿ ಹೊಡೆಯಿರಿ. ಇದು ನನ್ನ ವೈಯಕ್ತಿಕ ಅಭಿಪ್ರಾಯ. 1971ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರು ಪಾಕಿಸ್ತಾನದವರ ಮಂಡಿಯೂರಿಸಿದ್ದರು. ಈಗ ಲಕ್ಷಾಂತರ ಜನರ ಮಂಡಿಯೂರಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತೀರ್ಮಾನಗಳಿಗೆ ನಮ್ಮ ಬೆಂಬಲವಿದೆ. ಪಾಕಿಸ್ತಾನದವರ ಮನೆಗೆ ನುಗ್ಗಿ ಹೊಡೆಯಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಕ್ಕಾಗಲೂ ಇದನ್ನೇ ಹೇಳಿದ್ದೇನೆ. ಈ ವಿಚಾರದಲ್ಲಿ ಅಭಿಪ್ರಾಯ ಭಿನ್ನತೆ ಇಲ್ಲ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.