ADVERTISEMENT

ಪಾಕ್ ವಿರುದ್ಧ ಯುದ್ಧ ಅಗತ್ಯವಿಲ್ಲ ಎಂಬ CM ಹೇಳಿಕೆಗೆ ಪ್ರತಿಕ್ರಿಯಿಸಲ್ಲ: ಡಿಕೆಶಿ

ಪಿಟಿಐ
Published 27 ಏಪ್ರಿಲ್ 2025, 7:08 IST
Last Updated 27 ಏಪ್ರಿಲ್ 2025, 7:08 IST
<div class="paragraphs"><p>ಡಿ.ಕೆ.ಶಿವಕುಮಾರ್</p></div>

ಡಿ.ಕೆ.ಶಿವಕುಮಾರ್

   

ಬೆಂಗಳೂರು: ಪಾಕಿಸ್ತಾನದ ವಿರುದ್ಧ ಯುದ್ಧ ಸಾರುವ ಅಗತ್ಯವಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ 'ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಹೇಳಿಕೆಯನ್ನು ಪಿಟಿಐ ವರದಿ ಮಾಡಿದೆ.

ADVERTISEMENT

'ಈಗಾಗಲೇ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ನನ್ನ ಪಕ್ಷವು ನಿಲುವನ್ನು ಸ್ಪಷ್ಟಪಡಿಸಿದೆ. ನಾವು ಸಭೆಯನ್ನು ಸೇರಿ ದಾಳಿಯನ್ನು ಖಂಡಿಸಿದ್ದೇವೆ' ಎಂದು ಅವರು ತಿಳಿಸಿದ್ದಾರೆ.

'ದೇಶದ ಭದ್ರತೆ, ಶಾಂತಿ ಅತ್ಯಂತ ಮುಖ್ಯವಾಗಿದೆ. ದೇಶವನ್ನು ರಕ್ಷಿಸಲು ನಾವೆಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗೋಣ' ಎಂದು ಹೇಳಿದ್ದಾರೆ.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, 'ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು' ಎಂದು ಪ್ರತಿಪಾದಿಸಿದ್ದರು.

'ನಾವು ಯುದ್ಧದ ಪರ ಇಲ್ಲ, ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆ ಹೆಚ್ಚಿಸಬೇಕು' ಎಂದಿದ್ದರು. ಸಿಎಂ ಹೇಳಿಕೆಗೆ ವಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.