ನವದೆಹಲಿ: ಬೆಂಗಳೂರಿನ ಅರಮನೆ ಮೈದಾನದ 15.36 ಎಕರೆಗೆ ₹3,400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರಗಳನ್ನು ಮೈಸೂರಿನ ರಾಜವಂಶಸ್ಥರಿಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ ನೀಡಿರುವ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿರುವ ಪುನರ್ ಪರಿಶೀಲನಾ ಅರ್ಜಿಯನ್ನು ತ್ರಿಸದಸ್ಯ ಪೀಠ ಆಗಸ್ಟ್ 18ರಂದು ವಿಚಾರಣೆ ನಡೆಸಲಿದೆ.
ರಾಜವಂಶಸ್ಥರಿಗೆ ಟಿಡಿಆರ್ ನೀಡಬೇಕೆಂದು ದ್ವಿಸದಸ್ಯ ಪೀಠದ ಆದೇಶವನ್ನು ತ್ರಿಸದಸ್ಯ ಪೀಠವು ಮೇ 29ರಂದು ಅಮಾನತುಗೊಳಿಸಿತ್ತು. ಮುಖ್ಯ ಸಿವಿಲ್ ಮೇಲ್ಮನವಿಯ ವಿಚಾರಣೆಯನ್ನು ಆಗಸ್ಟ್ 18ರಂದು ನಡೆಸುವುದಾಗಿಯೂ ಪೀಠ ತಿಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.