ADVERTISEMENT

ಅರಮನೆ ಮೈದಾನದಲ್ಲಿ ಪಂಚಮಸಾಲಿ ಸಮಾವೇಶ: ಹರಿದು ಬಂದ ಜನಸಾಗರ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2021, 6:44 IST
Last Updated 21 ಫೆಬ್ರುವರಿ 2021, 6:44 IST
ಹರಿದು ಬಂದ ಜನಸಾಗರ
ಹರಿದು ಬಂದ ಜನಸಾಗರ   

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ನಗರದ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆರಂಭವಾಗಿದೆ. ಮೀಸಲಾತಿಗೆ ಆಗ್ರಹಿಸಿ ಕೂಡಲ ಸಂಗಮದಿಂದ ಆರಂಭವಾದ ಪಾದಯಾತ್ರೆ ಅರಮನೆ ಮೈದಾನದಲ್ಲಿ ಸಮಾರೋಪಗೊಳ್ಳುತ್ತಿದೆ.

ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸಮಾವೇಶದ ನೇತೃತ್ವ ವಹಿಸಿದ್ದಾರೆ. ಸಚಿವ ಮುರುಗೇಶ ನಿರಾಣಿ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಅನಿಲ ಬೆನಕೆ, ಶಿವಾನಂದ ಪಾಟೀಲ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿದ್ದಾರೆ.

ಶಾಸಕ‌ ಬಸನಗೌಡ ಪಾಟೀಲ ಯತ್ನಾಳ ಅವರು ಖಡ್ಗ ಝಳಪಿಸುವ ಮೂಲಕ ಪಂಚಮಸಾಲಿ ಸಮಾವೇಶವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿದ್ದ ಸ್ವಾಮೀಜಿಗಳು ಪಾಂಚಜನ್ಯ ಮೊಳಗಿಸಿದರು. ಹೋರಾಟ ಸಮಿತಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಕಹಳೆ ಊದಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.